ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
ರಿಯಾದ್, ಫೆ 28 : ಇತ್ತೀಚೆಗೆ ಕಾಣಿಸಿಕೊಂಡಿರುವ ಕೊರೊನಾ ಸೋಂಕು ವಿಶ್ವಾದ್ಯಂತ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮುಸ್ಲಿಮರ ವಾರ್ಷಿಕ ಹಜ್ ಯಾತ್ರೆಯ ಮೇಲೆ ಸೌದಿ ಅರೇಬಿಯಾ ನಿರ್ಬಂಧ ಹೇರಿದೆ.
ಸೌದಿ ಅರೇಬಿಯಾ ಸರ್ಕಾರ ಪವಿತ್ರ ಮೆಕ್ಕಾ ಮತ್ತು ಮದೀನಾ ಗಳಿಗೆ ಭೇಟಿಯ ಮೇಲೆ ನಿರ್ಬಂಧ ಹೇರಿದ್ದು ಇಸ್ಲಾಂ ನ ಪವಿತ್ರ ಯಾತ್ರಾಸ್ಥಳಕ್ಕೆ ಬರುವವರ ವೀಸಾಗಳನ್ನು ರದ್ದು ಮಾಡಿದೆ.
ಪ್ರತಿ ವರ್ಷವೂ ಮೆಕ್ಕಾ ಮತ್ತು ಮದೀನಾಗಳಿಗೆ ಲಕ್ಷಾಂತರ ಮಂದಿ ಭೇಟಿ ನೀಡುತ್ತಾರೆ. ಸೌದಿ ಅರೇಬಿಯಾ ದಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟ ಪ್ರಕರಣಗಳು ವರದಿಯಾಗಿಲ್ಲ. ನೆರೆಹೊರೆಯ ರಾಷ್ಟ್ರಗಳಲ್ಲಿ ಮಧ್ಯ ಪ್ರಾಚ್ಯದಲ್ಲಿ 240 ಮಂದಿಗೆ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ಕ್ರಮವಾಗಿ ಯಾರಿಗೂ ವೀಸಾ ನೀಡದಿರಲು ನಿರ್ಧರಿಸಲಾಗಿದೆ ಎಂದು ಸೌದಿ ಸರಕಾರ ತಿಳಿಸಿದೆ.
ಈ ನಿರ್ಬಂಧದ ಅವಧಿಯ ಬಗ್ಗೆ ಸರ್ಕಾರ ಮಾಹಿತಿ ನೀಡಿಲ್ಲ. ಹೀಗಾಗಿ ಮೆಕ್ಕಾ ಯಾತ್ರೆ ತೆರಳಲು ಸಿದ್ಧತೆ ನಡೆಸಿದ ಲಕ್ಷಾಂತರ ಮಂದಿ ಗೊಂದಲದಲ್ಲಿ ಸಿಲುಕುವಂತಾಗಿದೆ.
ವಿಶ್ವಾದ್ಯಂತ ಕೊರೊನಾ ಸೋಂಕು ಹರಡುತ್ತಿದ್ದು ಇರಾನ್‌ನಲ್ಲಿ ಈ ಸೋಂಕಿಗೆ 26 ಮಂದಿ ಬಲಿಯಾಗಿದ್ದಾರೆ. ಚೀನಾದಲ್ಲಿ 2,700 ಕ್ಕೂ ಹೆಚ್ಚು ಜನರು ಈ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 