ಐವರು ಸಂಸದರಿಗೂ ಅಮರಿಕೊಂಡ ಕರೋನ ಸೋಂಕು
ವಾಷಿಂಗ್ಟನ್, ಮಾರ್ಚ್ 28, ಅಮೆರಿಕದಲ್ಲಿ ಕರೋನ ಸೋಂಕು ಬಹಳ ವೇಗವಾಗಿ ಹಬ್ಬುತ್ತಿದ್ದು ಈವರೆಗೆ ಐವರು ಸಂಸದರು ಮಾರಕ ಜಾಢ್ಯಕ್ಕೆ ತುತ್ತಾಗಿದ್ದಾರೆ. ಕಾಂಗ್ರೆಸ್ಸಿಗ ಮೈಕ್ ಕೆಲ್ಲಿ ಅವರಿಗೂ ಕರೋನಸೋಂಕು ಇರುವುದು ವೈದ್ಯಕೀಯ ಪರೀಕ್ಷೆಯಿಂದ ದೃಡಪಟ್ಟಿದ್ದು ಅವರು ಕರೋನ ಸೋಂಕಿಗೆ ತುತ್ತಾದ ಐದನೇ ಸಂಸದರಾಗಿದ್ದಾರೆ ಎಂದು ಕಾಂಗ್ರೆಸ್ ಕಚೇರಿ ಪತ್ರಿಕಾ ಪ್ರಕಟಣೆ ತಿಳಿಸಿದೆ. ಈ ವಾರದ ಆರಂಭದಲ್ಲಿ ಸೌಮ್ಯ ಜ್ವರ ತರಹದ ರೋಗಲಕ್ಷಣ ಕಾಡಲು ಶುರುಮಾಡಿದ ನಂತರ ವೈದ್ಯರನ್ನು ಸಂಪರ್ಕಿಸಿದ್ದು ನನ್ನ ವೈದ್ಯರು ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಆದೇಶಿಸಿದ್ದರು ನಂತರ ಈಗ ಪರೀಕ್ಷೆಯ ನಂತರ ವರದಿ ಬಂದಿದ್ದು ಪಾಸಿಟಿವ್ ಬಂದಿದೆ ಎಂದೂ ಕೆಲ್ಲಿ ತಿಳಿಸಿದ್ದಾರೆ.ರೋಗಲಕ್ಷಣಗಳು ಸೌಮ್ಯವಾಗಿದ್ದು ಪೂರ್ಣ ಚೇತರಿಕೆಯಾಗುವವರೆಗೂ ಮನೆಯಿಂದಲೇ ಕೆಲಸ ಮಾಡುವುದನ್ನು ಮುಂದುವರಿಸುವುದಾಗಿ ಅವರು ಹೇಳಿಕೊಂಡಿದ್ದಾರೆ. ಶುಕ್ರವಾರದಂದು 2 ಟ್ರಿಲಿಯನ್ ಪರಿಹಾರ ಪ್ಯಾಕೇಜ್ ಅನ್ನು ಅನುಮೋದಿಸಲು, ಸಮಯದಲ್ಲಿ ಸದನದಲ್ಲಿ ಹಾಜರಿದ್ದು ಮತ ಚಲಾಯಿಸಲು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ಗೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದೂ ಹೇಳಿಕೊಂಡಿದ್ದರು .
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 