6 ಕೋಟಿ ಜನರನ್ನು ಕಡುಬಡತನಕ್ಕೆ ನೂಕಲಿದೆ ಕರೋನ ಸೋಂಕು..!
ವಾಷಿಂಗ್ಟನ್, ಮೇ, 20,ಚೀನಾದ ವುಹಾನ್ ನಲ್ಲಿ ಜನ್ಮತಾಳಿ ನಂತರ ವಿಶ್ವದ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಕೊರೋನಾ ಸೋಂಕಿನಿಂದ ಜಗತ್ತಿನ ಸುಮಾರು 6 ಕೋಟಿಗೂ ಅಧಿಕ ಹೆಚ್ಚು ಜನರು ಕಡು ಬಡತನಕ್ಕೆ ಜಾರಲಿದ್ದಾರೆ ಎಂದು ವಿಶ್ವ ಬ್ಯಾಂಕ್ ಆತಂಕ ವ್ಯಕ್ತಪಡಿಸಿದೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ವಿಶ್ವ ಬ್ಯಾಂಕ್ ಅಧ್ಯಕ್ಷ ಡೇವಿಡ್ ಮಲ್ಪಾಸ್ ಅವರು, 'ಕೋವಿಡ್-19 ಪಿಡುಗು ವಿಶ್ವದ ವಿವಿಧ ದೇಶಗಳಲ್ಲಿ 6 ಕೋಟಿ ಮಂದಿಯನ್ನು 'ಅತಿ ಬಡತನ'ಕ್ಕೆ ದೂಡಲಿದ್ದು, ಮೂರು ವರ್ಷಗಳ ದುಡಿಮೆಯನ್ನು ಈ ಪಿಡುಗು ಕಿತ್ತುಕೊಂಡಿದೆ ಎಂದು ಹೇಳಿದ್ದಾರೆ.'ವಿಶ್ವದ ಆರ್ಥಿಕತೆ ಈ ವರ್ಷ ಶೇ 5ರಷ್ಟು ಕಡಿಮೆಯಾಗಬಹುದು ಎಂದ ಅವರು ವಿಶೇಷವಾಗಿ ಬಡ ದೇಶಗಳ ಮೇಲೆ ಈ ಪರಿಣಾಮ ಕೆಟ್ಟದಾಗಿರಲಿದೆ. ಕಳೆದ ಮೂರು ವರ್ಷಗಳಲ್ಲಿ ಬಡತನ ನಿರ್ಮೂಲನ ಕಾರ್ಯಕ್ರಮಗಳ ಮೂಲಕ ಸಾಧಿಸಲಾದ ಪ್ರಗತಿಯನ್ನು ಕೊರೊನಾ ನಾಶ ಮಾಡಲಿದೆ. ಅತ್ಯಂತ ಕೆಟ್ಟ ಆರ್ಥಿಕ ಹಿಂಜರಿತ ಜಗತ್ತನ್ನು ಕಾಡಲಿದೆ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 