ಹಾಸನದಲ್ಲಿ ಮತ್ತೆ 13 ಜನರಲ್ಲಿ ಕೊರೋನಾ ಸೋಂಕು: ಸೋಂಕಿತರ ಸಂಖ್ಯೆ 67 ಕ್ಕೆ ಏರಿಕೆ
ಹಾಸನ, ಮೇ 21, ಜಿಲ್ಲೆಯಲ್ಲಿ ಹೊಸದಾಗಿ 13 ಕೋವಿದ್ 19 ಪ್ರಕರಣ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 67 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಅರ್ ಗಿರೀಶ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು ಇಂದು ವರದಿಯಾದ ಪ್ರಕರಣಕಲ್ಲಿ ಎಲ್ಲರೂ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ ಎಂದರು ಹಾಸನ ಜಿಲ್ಲೆಯ ಪಾಲಿಗೆ ಮಹಾರಾಷ್ಟ್ರದಿಂದ ಅಗಮಿಸಿದವರಿಂದ ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿದೆ. ಇಂದು ಸೋಂಕು ಪತ್ತೆಯಾದವರಲ್ಲಿ ಆರು ಮಂದಿ ಹೊಳೆನರಸೀಪುರ ತಾಲ್ಲೂಕು ಹಾಗೂ 7 ಮಂದಿ ಚನ್ನರಾಯಪಟ್ಟಣ ತಾಲ್ಲೂಕಿಗೆ ಸೇರಿದವರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಗಿರೀಶ್ ಹೇಳಿದರು.ಈ ವರಗಿನ ವರದಿಯಂತೆ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಗರಿಷ್ಠ 42 ಮಂದಿ ಸೋಂಕಿತರು ಪತ್ತೆಯಾಗಿದ್ದು, ಹೊಳೆನರಸೀಪುರ 16 ಆಲೂರು ತಾಲ್ಲೂಕಿನಲ್ಲಿ 3 ಅರಕಲಗೂಡು 2 ಅರಸೀಕೆರೆ1,ಹಾಸನದಲ್ಲಿ ಮೂರು ಪ್ರಕರಣ ದಾಖಲಾಗಿವೆ ಎಂದು ಅವರು ವಿವರಒದಗಿಸಿದರು.ಹಾಸನ ತಾಲೂಕಿನ ಮೂರು ಪ್ರಕರಣಗಳಲ್ಲಿ ಎರಡು ತಮಿಳುನಾಡು ಮೂಲದಿಂದ ಬಂದಿದ್ದು ಉಳಿದ ಜಿಲ್ಲೆಯ ಇತರ ಎಲ್ಲಾ 65 ಪ್ರಕರಣಗಳು ಮಹಾರಾಷ್ಟ್ರದಿಂದ ಆಗಮಿಸಿದವರಲ್ಲಿ ದೃಢಪಟ್ಟಿದೆ. ಎಲ್ಲಾ ಸೋಂಕಿತರನ್ನು ಹಾಸನದ ಕೋವಿಡ್ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಶಂಕಿತರು ವಿವಿಧ ತಾಲ್ಲೂಕುಗಳಲ್ಲಿ ಸಾಂಸ್ಥಿಕ ಕೇಂದ್ರಗಳಲ್ಲಿ ಕ್ವಾರಂಟೈನ್ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ತಿಳಿಸಿದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 