ಕೊರೋನಾ ಸೋಂಕು ಹಿನ್ನೆಲೆ ವೈದ್ಯರು ಸೇರಿ 810 ವೈದ್ಯಕಿ ಸಿಬ್ಬಂದಿಯ ನೇಮಕಕ್ಕೆ ಅರ್ಜಿ ಆಹ್ವಾನ
ಬೆಂಗಳೂರು,
ಮಾ.31,ಕೊರೋನಾ ಸೋಂಕು ತಡೆಗಟ್ಟಲು ವೈದ್ಯಕೀಯ ಸಿಬ್ಬಂದಿ ಕೊರತೆ ಇರುವುದನ್ನು ಮನಗಂಡ
ಸರ್ಕಾರ, ಸಿಬ್ಬಂದಿಯ ನೇಮಕಕ್ಕೆ ಅರ್ಜಿ ಆಹ್ವಾನಿಸಿದೆ.ಆಸ್ಪತ್ರೆಗಳಲ್ಲಿ ದಿನದ 24
ಗಂಟೆ ಪಾಳಿಯಲ್ಲಿ ಕೆಲಸ ಮಾಡಲು ಹೆಚ್ಚು ವೈದ್ಯಕೀಯ ಸಿಬ್ಬಂದಿ ಅಗತ್ಯವಿರುವುದರಿಂದ
ವೈದ್ಯರು, ತಜ್ಞರು, ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಹಾಗೂ ಡಿ ದರ್ಜೆ ನೌಕರರ
ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಗುತ್ತಿಗೆ ಅಥವಾ ಹೊರಗುತ್ತಿಗೆ ಆಧಾರದ ಮೇಲೆ
6 ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಮಾತ್ರ ಈ ಹುದ್ದೆಗಳನ್ನು ಭರ್ತಿ
ಮಾಡಿಕೊಳ್ಳಲಾಗುತ್ತದೆ. ರಾಜ್ಯದ 18 ಜಿಲ್ಲೆಗಳ ಪೈಕಿ, ಪ್ರತಿ ಜಿಲ್ಲೆಗೆ 45 ಜನರಂತೆ
ಒಟ್ಟು 810 ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು
ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.ವೈದ್ಯರಿಗೆ ಪ್ರತಿ ತಿಂಗಳಿಗೆ 60 ಸಾವಿರ,
ಶುಶ್ರೂಷಕರಿಗೆ 20 ಸಾವಿರ, ಪ್ರಯೋಗಶಾಲಾ ತಂತ್ರಜ್ಞರಿಗೆ 15 ಸಾವಿರ, ಡಿ ದರ್ಜೆ
ನೌಕರರಿಗೆ 12 ಸಾವಿರ ವೇತನ ನಿಗದಿ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲೂ
ಅರ್ಜಿ ಆಹ್ವಾನ: ಇದೇ ಉದ್ದೇಶಕ್ಕೆ ಬಿಬಿಎಂಪಿಯ ನಗರ ಪ್ರಾಥಮಿಕ ಆರೋಗ್ಯ
ಕೇಂದ್ರಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ವೈದ್ಯ ಹುದ್ದೆಗಳಿಗೆ
ಅರ್ಜಿ ಆಹ್ವಾನಿಸಲಾಗಿದೆ. ಎರಡರಿಂದ ಮೂರು ದಿನಗಳಲ್ಲಿ ಈ ಪ್ರಕ್ರಿಯೆ ಮುಗಿಸಲಾಗುತ್ತದೆ
ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 