ಧಾರವಾಡ - ಹುಬ್ಬಳ್ಳಿ

ಧರಣಿಗೆ ಮಣಿದ ಪಾಲಿಕೆ: ಅಂಬೇಡ್ಕರ್ ಭವನ ಕಾಮಗಾರಿ ಶೀಘ್ರ ಆರಂಭ

ಧರಣಿಗೆ ಮಣಿದ ಪಾಲಿಕೆ: ಅಂಬೇಡ್ಕರ್ ಭವನ ಕಾಮಗಾರಿ ಶೀಘ್ರ ಆರಂಭ



ಹುಬ್ಬಳ್ಳಿ 09 ; ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್‌ ನಂ. 68ರ ಜೈ ಭೀಮ್ ನಗರದ ನಿವಾಸಿಗಳ ಬಹುವರ್ಷಗಳ ಬೇಡಿಕೆಯಾಗಿರುವ ಡಾ. ಬಿ.ಆರ್‌. ಅಂಬೇಡ್ಕರ್ ಸಾಂಸ್ಕೃತಿಕ ಸಮುದಾಯ ಭವನದ ನಿರ್ಮಾಣ ಕಾಮಗಾರಿಯನ್ನು ತಕ್ಷಣ ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿ, ಕಳೆದ ಐದು ದಿನಗಳಿಂದ ಮಹಾನಗರಪಾಲಿಕೆಯ ಮುಂಭಾಗದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿತ್ತು.

ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ ಜೋಶಿ ಅವರ ಅನುದಾನದಡಿ ವಿವಿಧ ಕಾಮಗಾರಿಗಳಿಗಾಗಿ ಸುಮಾರು 8 ಲಕ್ಷ ಹಣ ಬಿಡುಗಡೆಯಾಗಿದ್ದರೂ, ಸಮುದಾಯ ಭವನದ ನಿರ್ಮಾಣ ಕಾಮಗಾರಿಗೆ ಅಗತ್ಯವಾದ ಅನುದಾನವನ್ನು ಬಿಡುಗಡೆ ಮಾಡಲು ಮಹಾನಗರಪಾಲಿಕೆ ಆಯುಕ್ತರಾದ ಡಾ. ರುದ್ರೇಶ್ ಗಾಳಿ ಅವರು ವಿಳಂಬ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದರು.  

ಕೂಡಲೇ ಅನುದಾನ ಬಿಡುಗಡೆಗೊಳಿಸಿ, ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಆರಂಭಿಸಬೇಕು ಎಂದು ಆಗ್ರಹಿಸಿ ಈ ಹೋರಾಟವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನಾಕಾರರ ಆಗ್ರಹಕ್ಕೆ ಸ್ಪಂದಿಸಿದ ಆಯುಕ್ತರು ಲಿಖಿತ ಭರವಸೆ ನೀಡಿದರು. ಅಲ್ಲದೆ, ಕಾಮಗಾರಿಯನ್ನು ಕೈಗೊಳ್ಳಬೇಕಾದ ಗುತ್ತಿಗೆದಾರರನ್ನು ಪ್ರತಿಭಟನಾ ಸ್ಥಳಕ್ಕೆ ಕರೆಸಿ, ಮಹಾನಗರಪಾಲಿಕೆಯ ಸಿಬ್ಬಂದಿಯೊಂದಿಗೆ ಸಮನ್ವಯ ಸಾಧಿಸಿ ತಕ್ಷಣ ಕಾಮಗಾರಿಯನ್ನು ಪ್ರಾರಂಭಿಸುವಂತೆ ಸೂಚಿಸಿದರು.ಜೈ ಭೀಮ್ ನಗರದ ನಿವಾಸಿಗಳ ಬಹುದಿನಗಳ ಬೇಡಿಕೆಯಾಗಿರುವ ಡಾ. ಬಿ.ಆರ್‌. ಅಂಬೇಡ್ಕರ್ ಸಾಂಸ್ಕೃತಿಕ ಸಮುದಾಯ ಭವನದ ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದಂತೆ ಆಯುಕ್ತರು ಲಿಖಿತ ಭರವಸೆ ನೀಡಿರುವುದು.
























ಸುದ್ದಿ ಓದಿ