ಕಿಮ್ಸ್ ನಿರ್ದೇಶಕರ ವಿರುದ್ಧ ಭ್ರಷ್ಟಾಚಾರ ಆರೋಪ: ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ
Corruption allegations against KIMS Director: Sit-in protest demanding a high-level inquiry
ಕೊಪ್ಪಳ, ಜು.30: ಕೊಪ್ಪಳದ ಕಿಮ್ಸ್ ಸಂಸ್ಥೆಯಲ್ಲಿ ವ್ಯಾಪಕ ಆಡಳಿತಾತ್ಮಕ ಅಕ್ರಮ, ಭ್ರಷ್ಟಾಚಾರ ಹಾಗೂ ರೋಗಿಗಳಿಗೆ ಮೂಲಭೂತ ಸೌಲಭ್ಯಗಳ ಕೊರತೆ ಇದೆ ಎಂದು ಆರೋಪಿಸಿ, ಸಂಸ್ಥೆಯ ನಿರ್ದೇಶಕರ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಬೇಕು ಹಾಗೂ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಕಿಮ್ಸ್ ಆಡಳಿತ ಮಂಡಳಿ ನಾಮನಿರ್ದೇಶಿತ ಸದಸ್ಯ ಹಾಗೂ ಯುವ ನಾಯಕ ಸಲೀಂ ಅಳವಂಡಿ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಕಿಮ್ಸ್ನಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮಗಳ ಕುರಿತು ಸ್ವತಂತ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಲಾಗಿದೆ.
ಮನವಿಯಲ್ಲಿ ಉಲ್ಲೇಖಿಸಿರುವ ಪ್ರಮುಖ ಆರೋಪಗಳು ಇಂತಿವೆ:
ಸಿಆಸ್ಪತ್ರೆಯಲ್ಲಿ ಕುಡಿಯುವ ನೀರು, ಆಸನ ವ್ಯವಸ್ಥೆ, ಶೌಚಾಲಯ ಹಾಗೂ ಕಾಯುವ ಕೊಠಡಿಗಳಂತಹ ಮೂಲಭೂತ ಸೌಲಭ್ಯಗಳ ಕೊರತೆ.
ಸಿಜೈವಿಕ ಮತ್ತು ದ್ರವ ತ್ಯಾಜ್ಯಗಳ ಸಮರ್ಕ ವಿಲೇವಾರಿ ಇಲ್ಲದ ಕಾರಣ ಆಸ್ಪತ್ರೆ ಆವರಣದಲ್ಲಿ ಅಸ್ವಚ್ಛತೆ ಉಂಟಾಗಿದ್ದು, ಸೋಂಕು ಹರಡುವ ಆತಂಕ.
ಸಿಎಸ್ಟಿಪಿ ನಿರ್ವಹಣೆಯ ಹೆಸರಿನಲ್ಲಿ ಯಾವುದೇ ಕೆಲಸ ಮಾಡದೆ ನಕಲಿ ದಾಖಲೆಗಳ ಮೂಲಕ ಲಕ್ಷಾಂತರ ರೂಪಾಯಿ ಬೋಗಸ್ ಬಿಲ್ ಮಾಡಿರುವ ಆರೋಪ.
ಸಿತಾಂತ್ರಿಕ ಅನುಮೋದನೆ ಪಡೆಯದೇ ಕಾಮಗಾರಿಗಳನ್ನು ನಡೆಸಿ ಭ್ರಷ್ಟಾಚಾರ ಎಸಗಿರುವ ಆರೋಪ.
ಸಿವೈದ್ಯಕೀಯ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಶುಲ್ಕವನ್ನು ಕಾಲೇಜಿನ ಅಭಿವೃದ್ಧಿಗೆ ಬಳಸದೇ ದುರುಪಯೋಗಪಡಿಸಿಕೊಂಡಿರುವ ಆರೋಪ.
ಸಿಆಡಳಿತಾತ್ಮಕ ಮಾಹಿತಿಗಳನ್ನು ನಿಯಮಬಾಹಿರವಾಗಿ ಮುಚ್ಚಿಡುತ್ತಿರುವ ಆರೋಪ.
ಪ್ರತಿಭಟನಾಕಾರರು ಕಿಮ್ಸ್ ನಿರ್ದೇಶಕರನ್ನು ತಕ್ಷಣ ಅಮಾನತುಗೊಳಿಸಿ, ಎಲ್ಲಾ ಆರೋಪಗಳ ಕುರಿತು ಉನ್ನತ ಮಟ್ಟದ ತನಿಖಾ ಸಮಿತಿಯಿಂದ ಪರೀಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು. ಜೊತೆಗೆ, ಹೊಸ 450 ಹಾಸಿಗೆಗಳ ಆಸ್ಪತ್ರೆಯ ಆಡಳಿತ ವ್ಯವಸ್ಥೆ ಹಾಗೂ ಸ್ವಚ್ಛತೆಯನ್ನು ಸುಧಾರಿಸಲು ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಈ ಮನವಿಯ ಪ್ರತಿಯನ್ನು ಮುಖ್ಯಮಂತ್ರಿ, ವೈದ್ಯಕೀಯ ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಲೋಕಾಯುಕ್ತರಿಗೆ ಕಳುಹಿಸಲಾಗಿದೆ ಎಂದು ಸಲೀಂ ಅಳವಂಡಿ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 