ಅರ್ನಬ್ ಗೋಸ್ವಾಮಿ, ಪತ್ನಿಯ ನಿರೀಕ್ಷಣಾ ಜಾಮೀನು ನ.23ಕ್ಕೆ ಮುಂದೂಡಿದ ನ್ಯಾಯಾಲಯ
ಮುಂಬೈ, ನ 12: ತಮ್ಮ ವಿರುದ್ಧ ಮುಂಬೈ ಪೊಲೀಸರು ದಾಖಲಿಸಿರುವ ಮಹಿಳಾ ಪೊಲೀಸರ ಮೇಲೆ ಹಲ್ಲೆ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಅವರ ಪತ್ನಿ ಸಲ್ಲಿಸಿದ್ದ ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ಗುರುವಾರ ನ. 23ಕ್ಕೆ ಮುಂದೂಡಿದೆ.
ಈ ಕುರಿತು ಮಾಹಿತಿ ನೀಡಿರುವ ಗೋಸ್ವಾಮಿ ಪರ ವಕೀಲ ಶ್ಯಾಮ್ ಕಲ್ಯಾಣ್ಕರ್, ಇಂದು ಅರ್ಜಿಯ ವಿಚಾರಣೆ ನಡೆಯಬೇಕಿತ್ತು. ಆದರೆ, ನ್ಯಾಯಮೂರ್ತಿಗಳು ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ, ಮುಂದಿನ ದಿನಾಂಕ ನೀಡಲಾಗಿದೆ ಎಂದರು.