ಬಳ್ಳಾರಿ

ಕೋವಿಡ್: ಸಾರ್ವಜನಿಕರು ಒಟ್ಟಾಗಿ ಸೇರುವುದು ನಿಷೇಧ: ಪ್ರೀತಿ ಗೆಹ್ಲೋಟ್

ಕೋವಿಡ್:  ಸಾರ್ವಜನಿಕರು ಒಟ್ಟಾಗಿ ಸೇರುವುದು ನಿಷೇಧ: ಪ್ರೀತಿ ಗೆಹ್ಲೋಟ್

ಬಳ್ಳಾರಿ 30: ನಗರದಲ್ಲಿ ಕೋವಿಡ್-19ರ 2ನೇ ಅಲೆ ದಿನದಿನಕ್ಕೆ ಹೆಚ್ಚಾಗಿ ಹರಡುತ್ತಿರುವ ಪ್ರಕರಣಗಳು ಕಂಡುಬರುತ್ತಿದೆ. ಸಾರ್ವಜನಿಕರು ಒಟ್ಟಾಗಿ ಸೇರುವುದರಿಂದ ಒಬ್ಬರಿಂದ ಒಬ್ಬರಿಗೆ ಕೋವಿಡ್-19ರ ವೈರಾಣು ಹರಡುವ ಸಂಭವವು ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಕೋವಿಡ್ ನಿಯಂತ್ರಣದ ಸಲುವಾಗಿ ನಗರದಲ್ಲಿ ಮುಂಬರುವ ಯುಗಾದಿ, ಷಬ್-ಎ ಬರಾತ್, ಗುಡ್ ಪ್ರೈಡೇ, ಜಾತ್ರಾ ಉತ್ಸವಗಳು, ಸಮಾಜ ಸುಧಾರಕರ ಹಾಗೂ ಗಣ್ಯ ವ್ಯಕ್ತಿಗಳ ಜಯಂತಿಯನ್ನು ಹಾಗೂ ಬಹಿರಂಗ ಸಭೆಗಳು ಮತ್ತು ಇತ್ಯಾದಿ ಕಾರ್ಯಕ್ರಮಗಳಲ್ಲಿ ಗುಂಪಾಗಿ ಸೇರುವುದನ್ನು ನಿಷೇಧಿಸಿದೆ ಎಂದು ಮಹಾನಗರಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕನ್ನು ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಬಳಸುವುದು, ಅನಾವಶ್ಯಕವಾಗಿ ಅಲೆದಾಡುವುದನ್ನು ನಿಲ್ಲಿಸುವುದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಒಂದು ವೇಳೆ ಈ ಮೇಲೆ ಸೂಚಿಸಿರುವ ನಿಯಮಗಳನ್ನು ಪಾಲಿಸದಿದ್ದರೆ ಪ್ರತಿಯೊಬ್ಬರಿಗೆ 250 ರೂ.ಗಳ ದಂಡ ವಸೂಲಿ ಮಾಡಲಾಗುವುದು ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಾಲಂ ನಂ 51 ರಿಂದ 60ರ ಅನ್ವಯವಾಗುವ ಹಾಗೂ ಐ.ಪಿ.ಸಿ.ಸೆಕ್ಷನ್ 188 ರಂತೆ ಹಾಗೂ ಕರ್ನಾಟಕ ಸಾಂಕ್ರಮಿಕ ರೋಗಗಳ ಕಾಯ್ದೆ 2020 ರ ಕಲಂ (4) ಮತ್ತು (10) ರಂತೆ ಕಾನೂನಿನ ರೀತ್ಯಾ ಕ್ರಮಕೈಗೊಳ್ಳಲಾಗುವುದು ಎಂದು ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನಗರದ ನಾಗರೀಕರು 2 ನೇ ಸುತ್ತಿನ ಕೋವಿಡ್ -19 ರ ವೈರಾಣು ನಿಯಂತ್ರಣದ ಸಲುವಾಗಿ ಮುಂದಿನ ಆದೇಶದವರೆಗೆ ಮಹಾನಗರ ಪಾಲಿಕೆಯೊಂದಿಗೆ ಸಹಕರಿಸಲು ಅವರು ತಿಳಿಸಿದ್ದಾರೆ.

ಸುದ್ದಿ ಓದಿ