ಕೋವಿಡ್-19: ನೆಮ್ಮದಿಯಲ್ಲಿ ಜವಾಬ್ದಾರಿಯಿಂದ ನುಣುಚಿಕೊಳ್ಳದಿರಿ- ಸಿ.ಸಿ.ಪಾಟೀಲ
ಗದಗ, ಮೇ 10, ಗದಗ ಜಿಲ್ಲೆಯ ಚಿಕಿತ್ಸೆಯಲ್ಲಿದ್ದ ಕೊವಿಡ್-19 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವುದು ನಮಗೆಲ್ಲ ಒಂದು ಹಂತದ ನೆಮ್ಮದಿ ನೀಡಿದೆ. ಆದರೆ ಕೊವಿಡ್-19 ಸೋಂಕು ತಡೆ ಕುರಿತ ಜಿಲ್ಲೆಯ ಸಾರ್ವಜನಿಕರು, ಯುವಜನರ ಮತ್ತು ಅಧಿಕಾರಿ ಸಿಬ್ಬಂದಿಯಾದಿಯಾಗಿ ಸರ್ವರೂ ಹೆಚ್ಚಿನ ಜವಾಬ್ದಾರಿಯಿಂದ ಜೀವನವನ್ನು ನಡೆಸಬೇಕಾದ ಕುರಿತು ರಾಜ್ಯದ ಗಣಿ ಭೂವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಎಚ್ಚರಿಕೆಯ ಮನವಿ ಮಾಡಿದ್ದಾರೆ. ಕೊವಿಡ್-19 ಸೋಂಕಿನ ತಡೆ ಮತ್ತು ನಿಯಂತ್ರಣ ಕುರಿತು ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ, ಅನವಶ್ಯಕ ಓಡಾಟ, ಪ್ರಯಾಣ ನಿಲ್ಲಿಸುವ, ಮುಖಕ್ಕೆ ಮಾಸ್ಕ, ಸ್ಯಾನಿಟೈಜರ್ ಉಪಯೋಗ , ಆಗಾಗ ಕೈಗಳನ್ನು ಚೆನ್ನಾಗಿ ತೊಳೆದುಕೊಳ್ಳುವದು ನಮ್ಮ ನಿತ್ಯದ ಅಭ್ಯಾಸವಾಗಬೇಕು. ಎಲ್ಲರೂ ಈ ಮುಂಜಾಗ್ರತಾ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಪಾಲಿಸಿದಲ್ಲಿ ಮಾತ್ರ ಕೊವಿಡ್-19 ಸೋಂಕನ್ನು ಯಶಸ್ವಿಯಾಗಿ ತಡೆಗಟ್ಟಬಹುದು, ಕೊವಿಡ್-19 ಈಗ ದೇಶದ ಸರ್ಕಾರದ ಸಮಸ್ಯೆ ಮಾತ್ರವಲ್ಲ ಪ್ರತಿ ವ್ಯಕ್ತಿ, ಕುಟುಂಬ, ಸಮಾಜಗಳ ಅಳಿವು ಉಳಿವಿನ ಪ್ರಶ್ನೆ ಎಂಬುದನ್ನು ನಾವು ಅರಿತುಕೊಂಡು ತಪ್ಪದೇ ವೈಯಕ್ತಿಕ, ಸಾಮಾಜಿಕ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಸಚಿವ ಸಿ.ಸಿ.ಪಾಟೀಲ ಮನವಿ ಮಾಡಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 