ಬಾಂಗ್ಲಾದೇಶದಲ್ಲಿ 1,30,000 ದಾಟಿದ ಕೊವಿಡ್-19 ಪ್ರಕರಣಗಳು, ಸಾವಿನ ಸಂಖ್ಯೆ 1,661ಕ್ಕೆ ಏರಿಕೆ
ಕೊಲ್ಕತಾ, ಜೂನ್ 26: (ಕ್ಸಿನ್ಹುವಾ) ಬಾಂಗ್ಲಾದೇಶದಲ್ಲಿ ದೃಢಪಟ್ಟ ಕೊವಿಡ್-19 ಸೋಂಕು ಪ್ರಕರಣಗಳ ಸಂಖ್ಯೆ ಶುಕ್ರವಾರ 1,30,000 ದಾಟಿದ್ದು, ಸಾವಿನ ಸಂಖ್ಯೆ 1,661ಕ್ಕೆ ತಲುಪಿದೆ. ‘ಬಾಂಗ್ಲಾದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 3,868 ಹೊಸ ಕೊವಿಡ್-19 ಪ್ರಕರಣಗಳು ದೃಢಪಟ್ಟಿದ್ದು, 31 ಪುರುಷರು ಮತ್ತು 9 ಮಹಿಳೆಯರು ಸೇರಿದಂತೆ 40 ಸಾವುಗಳು ವರದಿಯಾಗಿವೆ.’ ಎಂದು ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿ ನಸಿಮಾ ಸುಲ್ತಾನಾ ಶುಕ್ರವಾರ ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ‘ದೇಶದಲ್ಲಿ ದೃಢಪಟ್ಟ ಸೋಂಕು ಪ್ರಕರಣಗಳ ಸಂಖ್ಯೆ 130,474ರಷ್ಟಿದ್ದರೆ, ಸಾವಿನ ಸಂಖ್ಯೆ 1,661 ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ ದಾಖಲೆಯ ಗರಿಷ್ಠ 18,498 ಮಾದರಿಗಳನ್ನು ದೇಶಾದ್ಯಂತ ಇರುವ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗಿದೆ.’ ಎಂದು ಅವರು ಹೇಳಿದ್ದಾರೆ.ಶುಕ್ರವಾರ 1,638 ರೋಗಿಗಳು ಸೋಂಕಿನಿಂದ ಚೇತರಿಸಿಕೊಳ್ಳುವುದರೊಂದಿಗೆ ಗುಣಮುಖರಾದವರ ಒಟ್ಟು ಸಂಖ್ಯೆ 53,133 ರಷ್ಟಿದೆ ಎಂದು ಅವರು ಹೇಳಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 