ರಾಷ್ಟ್ರೀಯ

ದೇಶದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ 95.83ಕ್ಕೆ ಏರಿಕೆ

ದೇಶದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ 95.83ಕ್ಕೆ ಏರಿಕೆ

ನವದೆಹಲಿ, ಡಿಸೆಂಬರ್ 28: ದೇಶಾದ್ಯಂತ ಕೋವಿಡ್-19 ಸೋಂಕಿನ ಚೇತರಿಕೆ ಪ್ರಮಾಣ ಶೇಕಡ 95.83ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ  21 ಸಾವಿರಕ್ಕಿಂತ ಅಧಿಕ ಸೋಂಕಿತರು ಗುಣಮುಖರಾಗಿ, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಇದರೊಂದಿಗೆ ದೇಶದಲ್ಲಿ ಈವರೆಗೆ ಗುಣಮುಖರಾದವರ ಸಂಖ್ಯೆ 97 ಲಕ್ಷದ 82 ಸಾವಿರಕ್ಕೆ ಏರಿದೆ.

ದೇಶಾದ್ಯಂತ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 2 ಲಕ್ಷದ 77 ಸಾವಿರಕ್ಕೆ ಇಳಿಕೆ ಕಂಡಿದೆ. ನಿನ್ನೆ 20 ಸಾವಿರದ 21 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಈವರೆಗೆ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ ಒಂದು ಕೋಟಿ ಎರಡು ಲಕ್ಷಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶಾದ್ಯಂತ 279 ಮಂದಿ ಸೋಂಕಿನಿಂದ ಸಾವನ್ನಪ್ಪುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ ಒಂದು ಲಕ್ಷದ 47 ಸಾವಿರದ 901ಕ್ಕೆ ಏರಿಕೆ ಕಂಡಿದೆ.

ಐಸಿಎಂಆರ್‍ನ ವರದಿಯಂತೆ ಕಳೆದ 24 ತಾಸಿನಲ್ಲಿ 7 ಲಕ್ಷ 15 ಸಾವಿರ ಕೋವಿಡ್ ಮಾದರಿ ಪರೀಕ್ಷೆಗಳನ್ನು ನಡೆಸಲಾಗಿದೆ. ಇದರೊಂದಿಗೆ ಈವರೆಗೆ ನಡೆಸಲಾದ ಒಟ್ಟು ಪರೀಕ್ಷೆಗಳ ಸಂಖ್ಯೆ 16 ಕೋಟಿ 88 ಲಕ್ಷಕ್ಕೆ ಏರಿದೆ.

 

ಸುದ್ದಿ ಓದಿ