ಕೋವಿಡ್ ಎರಡನೆಯ ಅಲೆ ನಿಯಂತ್ರಣ ಸಿದ್ಧತೆಗೆ ಸೂಚನೆ
ಶಿಗ್ಗಾವಿ 22: ಕೋವಿಡ್ ಎರಡನೇಯ ಅಲೆ ನಿಯಂತ್ರಣಕ್ಕೆ ಸಕಲ ರೀತಿಯ ವೈದ್ಯಕೀಯ ಸೌಲಭ್ಯಗಳನ್ನು ಮಾಡಿಟ್ಟುಕೊಳ್ಳುವಂತೆ ತಾಲೂಕ ಆಡಳಿತಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಟ್ಟು ನಿಟ್ಟಿನ ಸೂಚನೆ ನೀಡಿದರು.ಗುರುವಾರ ಬೆಂಗಳೂರಿನಲ್ಲಿ ವಿಡಿಯೋ ಕಾನ್ಪರೆನ್ಸ ಮೂಲಕ ತಾಲೂಕ ಮಟ್ಟದ ಅಧಿಕಾರಿಗಳೊಂದಿಗೆ ನೆಡೆಸಿದ ಸಭೆಯಲ್ಲಿ ಕಟ್ಟು ನಿಟ್ಟಿನ ಸೂಚನೆ ನೀಡಿದರು.ಕೋವಿಡ್ ಎರಡನೇಯ ಅಲೆ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಮುಂಜಾಗ್ರತೆ ಕ್ರಮವಾಗಿ ಈಗಿನಿಂದಲೇ ಹೆಚ್ಚಿನ ಪ್ರಮಾಣದಲ್ಲಿ ಆಕ್ಸಿಜನ ಸಿಲಿಂಡರಗಳ ಸಂಗ್ರಹ ಮಾಡಿಟ್ಟುಕೊಳ್ಳಿ, ರೆಮ್ಡಿಸಿವರ್ ಔಷದವನ್ನು ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹಿಸಿಡಿ, ಲಸಿಕಾ ಪ್ರಮಾಣವನ್ನು ಹೆಚ್ಚು ಮಾಡಿರಿ, ಸಿಬ್ಬಂದಿ ವ್ಯವಸ್ಥೆ, ಟೆಸ್ಟಿಂಗ ಸಂಖೈಯನ್ನು ಹೆಚ್ಚಿಸಬೇಕು ಅಲ್ಲದೇ ತಾಲೂಕಿನಲ್ಲಿರುವ ಆಸ್ಪತ್ರೆಗಳಲ್ಲಿ ಎಲ್ಲ ವ್ಯವಸ್ಥೆಗಳನ್ನು ಮಾಡಿಟ್ಟುಕೊಳ್ಳಿ ಹಾಗೂ ಜಿಂಕ ಮತ್ತು ಇತರೆ ಔಷಧಿ ಸಂಗ್ರಹಿಸಿಡಿ, ಐಸಿಯು ಬೆಡ್ಗಳನ್ನು ಸಜ್ಜು ಮಾಡಿ ಇಟ್ಟು ಕೊಳ್ಳಿರಿ. ರೋಗಿಯ ಆರೋಗ್ಯದ ಮೇಲೆ ನಿಗಾವಹಿಸಬೇಕು ಮತ್ತು ತಾಲೂಕಿನಲ್ಲಿ ಮದುವೆ ಮುಂಜಿವೆ ಜನಸಂದಣಿಯನ್ನು ಕಟ್ಟು ನಿಟ್ಟಾಗಿ ನಿಯಂತ್ರಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದರು.ಈ ಸಂದರ್ಭದಲ್ಲಿ ಸವಣೂರ ಉಪವಿಭಾಗಾಧಿಕಾರಿ ಅನ್ನಪೂರ್ಣಾ ಮುದಕಮ್ಮನವರ, ತಹಶೀಲ್ದಾರ ಮಂಜುನಾಥ ಮುನ್ನೋಳ್ಳಿ, ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ ತುರಕಾಣಿ, ತಾಲೂಕ ಆಸ್ಪತ್ರೆ ಆಡಳಿತ ವೈಧ್ಯಾಧಿಕಾರಿ ಡಾ.ಹನುಮಂತಪ್ಪ .ಪಿ.ಹೆಚ್, ಡಿ.ವಾಯ್.ಎಸ್.ಪಿ ಓ.ಬಿ.ಕಲ್ಲೇಶಪ್ಪ, ಸಿ.ಪಿ.ಐ ಬಸವರಾಜ ಹಳಬಣ್ಣವರ, ತಾಲೂಕ ಆರೋಗ್ಯಾಧಿಕಾರಿ ಡಾ. ನಾಗೇಶ ಗುಂಗಿ, ಪುರಸಭೆ ಮುಖ್ಯಾಧಿಕಾರಿ ಮಲ್ಲಯ್ಯ ಹಿರೇಮಠ, ರೇಣುಕಾ ದೇಸಾಯಿ ಸೇರಿದಂತೆ ಎಲ್ಲ ಇಲಾಖೆಯ ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಗುರುವಾರ ಬೆಂಗಳೂರಿನಲ್ಲಿ ವಿಡಿಯೋ ಕಾನ್ಪರೆನ್ಸ ಮೂಲಕ ಶಿಗ್ಗಾವಿ ತಾಲೂಕ ಮಟ್ಟದ ಅಧಿಕಾರಿಗಳೊಂದಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಭೆ ನಡೆಸಿ ಕಟ್ಟು ನಿಟ್ಟಿನ ಸೂಚನೆ ನೀಡಿದರು.