ಜೂ. 2ರಂದು ಕ್ರೀಡಾಪಟುಗಳಿಗೆ ಕೋವಿಡ್ ಲಸಿಕಾಕರಣ
ಕಾರವಾರ 31: :ಅಂತರ್ ರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳಿಗೆ ಅದ್ಯತೆ ಮೇರೆಗೆ ಕೋವಿಡ್ ಲಸಿಕಾಕರಣವನ್ನು ಜೂ. 02ರಂದು ಜಿಲ್ಲಾ ಹಾಗೂ ಆಯಾ ತಾಲೂಕು ಆಸ್ಪತ್ರೆಗಳಲ್ಲಿ ನೀಡಲಾಗುತ್ತಿದ್ದು, 18 ರಿಂದ 44 ವರ್ಷ ವಯೋಮಿತಿಯ ಅರ್ಹ ಕ್ರೀಡಾಪಟುಗಳುತಮ್ಮ ವಿವರಗಳನ್ನು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಲ್ಲಿಸಿ ಪಡೆಯಬಹುದಾಗಿರುತ್ತದೆ ಎಂದು ಸಹಾಯಕ ನಿರ್ದೇಶಕಿ ಜಿ. ಗಾಯತ್ರಿಯವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿ ದೂರವಾಣಿ ಸಂಖ್ಯೆ:9480886551 ಸಂಪರ್ಕಿಸಬಹುದಾಗಿರುತ್ತದೆ ಎಂದು ಅವರು ಹೇಳಿದ್ದಾರೆ.