ಕಾಗವಾಡ

ಸಾರ್ವಜನಿಕರು ಸರ್ಕಾರದ ಆದೇಶಗಳನ್ನು ಪಾಲಿಸಿ: ಸಚಿವ ಶ್ರೀಮಂತ

ಸಾರ್ವಜನಿಕರು ಸರ್ಕಾರದ ಆದೇಶಗಳನ್ನು ಪಾಲಿಸಿ: ಸಚಿವ ಶ್ರೀಮಂತ
ಸಚಿವರು ಶ್ರೀಮಂತ ಬಾ ಪಾಟೀಲ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ

ಶೇಡಬಾಳ 6: ರಾಜ್ಯದಲ್ಲಿ ಕೊರೋನ ಪ್ರಕರಣಗಳ ಸಂಖ್ಯೆ ವೃದ್ಧಿಸುತ್ತಿದ್ದು, ಅದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರದ ಸಹಕಾರದೊಂದಿಗೆ ರಾಜ್ಯ ಸರ್ಕಾರ ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕಾರಣ ಸಾರ್ವಜನಿಕರು ಸರ್ಕಾರ ನೀಡುವ ಆದೇಶಗಳನ್ನು, ನಿಯಮವನ್ನು ಪಾಲಿಸುವಂತೆ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಪಾಟೀಲರು ಮನವಿ ಮಾಡಿಕೊಂಡಿದ್ದಾರೆ. 

ಮಹಾರಾಷ್ಟ್ರದಲ್ಲಿ ಕೋರೋನಾ ಹೆಚ್ಚಾಗಿದ್ದು, ಮಹಾರಾಷ್ಟ್ರದ ಗಡಿ ಗ್ರಾಮಗಳಿಂದ ಕರ್ನಾಟಕ ರಾಜ್ಯ ಪ್ರವೇಶಿಸುವ ಕಾಗವಾಡ - ಮಿರಜ ಹಾಗೂ ಇನ್ನಿತರ ಗಡಿಭಾಗದಲ್ಲಿ ಕೋವಿಡ್ ತಪಾಸಣೆ ಕೇಂದ್ರ ಪ್ರಾರಂಭಿಸಲಾಗಿದೆ. 

ಸಾರ್ವಜನಿಕರು ಅನವಶ್ಯಕವಾಗಿ ಹೊರಗಡೆ ಸಂಚರಿಸಬೇಡಿ, 45 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಕೋವಿಡ್ ಲಸಿಕೆಯನ್ನು ತೆಗೆದುಕೊಳ್ಳಿ, ಮಾಸ್ಕ್ ಧರಿಸಿ ಹಾಗೂ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೆ ಪಾಲಿಸಬೇಕೆಂದು ಕರ್ನಾಟಕದ ಜನತೆಗೆ ಹಾಗೂ ಗಡಿ ಭಾಗದ ಸಾರ್ವಜನಿಕರಿಗೆ ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದರು. 


ಸುದ್ದಿ ಓದಿ