ಉತ್ತರ ಕನ್ನಡದಲ್ಲಿ ಕೊವಿಡ್ ಪೀಡಿತರ ಸಂಖ್ಯೆ ಇಳಿಮುಖ
ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಇಳಿಮುಖ:
72 ಜನ ಗುಣಮುಖ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಮುಖ ಕಂಡು ಬಂದಿದೆ. ರವಿವಾರ 26 ಕೋವಿಡ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಹಾಗೆಯೇ 72 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸೋಂಕಿತ ಪ್ರಕರಣಗಳು : ಕಾರವಾರದಲ್ಲಿ 6 ಜನರಿಗೆ, ಅಂಕೋಲಾದಲ್ಲಿ 4, ಯಲ್ಲಾಪುರ, ಮುಂಡಗೋಡದಲ್ಲಿ ತಲಾ 5 ಜನರಿಗೆ , ಭಟ್ಕಳದಲ್ಲಿ 4, ಸಿದ್ದಾಪುರದಲ್ಲಿ 1, ಹಳಿಯಾಳದಲ್ಲಿ ಓರ್ವನಲ್ಲಿ ಸೋಂಕು ದೃಢಪಟ್ಟಿದೆ.
ಗುಣಮುಖ :
ಕಾರವಾರದಲ್ಲಿ 9, ಕುಮಟಾ, ಹೊನ್ನಾವರ, ಭಟ್ಕಳ, ಯಲ್ಲಾಪುರದಲ್ಲಿ ತಲಾ ಒಂದು, ಶಿರಸಿಯಲ್ಲಿ 16, ಹಳಿಯಾಳದಲ್ಲಿ 43 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಈತನಕ ಜಿಲ್ಲೆಯ 2,196 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 1,490 ಮಂದಿ ಗುಣಮುಖರಾಗಿದ್ದಾರೆ. 24 ಮಂದಿ ಸಾವನ್ನಪ್ಪಿದ್ದು, 682 ಸಕ್ರಿಯ ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. 90 ಜನ ಸೋಂಕಿತರು ಹೋಮ್ ಐಸೋಲೆಶನ್ ನಲ್ಲಿದ್ದಾರೆ.
.....
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 