ಆಸ್ಪತ್ರೆ ಕಟ್ಟಡದಿಂದ ಹಾರಿ ಕೋವಿಡ್ ಸೋಂಕಿತ ಆತ್ಮಹತ್ಯೆ
ಏಲೂರು,
ಆಂಧ್ರಪ್ರದೇಶ ಆಗಸ್ಟ್29: ಕೊರೋನವೈರಸ್ ಸೋಂಕು ದೃಢಪಟ್ಟಿದ್ದ ರೋಗಿಯೊಬ್ಬರು ಇಲ್ಲಿನ ಆಸ್ಪತ್ರೆ
ಕಟ್ಟಡದ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.
ಕೊರೊನಾವೈರಸ್ ಸೋಂಕು ದೃಢಪಟ್ಟಿದ್ದ 32 ವರ್ಷದ ವ್ಯಕ್ತಿಯನ್ನು ಆ 17 ರಂದು ಇಲ್ಲಿನ ಆಸ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸೋಂಕಿತ ವ್ಯಕ್ತಿ ಆಸ್ಪತ್ರೆಯ ಮೂರನೇ ಮಹಡಿಯಿಂದ ಹಾರಿದ್ದು, ತಕ್ಷಣವೇ ಸಾವನ್ನಪ್ಪಿದ್ದಾನೆ.
ವೃತ್ತ ಪೊಲೀಸ್ ನಿರೀಕ್ಷಕ ಎ ಶ್ರೀನಿವಾಸ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಜವಾದ ಕಾರಣಗಳನೇಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.