ಎಸ್.ಐ.ಆರ್. ಕುರಿತು ಭಿತ್ತಿಚಿತ್ರ ಸ್ಪರ್ಧೆ ಮೂಲಕ ಜಾಗೃತಿ
ಕಾರವಾರ 25 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ - 2026 ಅಂಗವಾಗಿ ವಿದ್ಯಾರ್ಥಿಗಳಲ್ಲಿ ಎಸ್.ಆಯ್.ಆರ್. ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಶಾಲಾ ಹಾಗೂ ಕಾಲೇಜುಗಳಲ್ಲಿ ಸ್ಥಾಪಿತವಾಗಿರುವ ಇಎಲ್ಸಿ ರಾಯಭಾರಿಗಳಿಗೆ ಆಯೋಜಿಸಿದ್ದ ಭಿತ್ತಿಚಿತ್ರ ಸ್ಪರ್ಧೆಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ದೀಲೀಷ ಶಶಿಶನಿವಾರ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲರ ಸಹಕಾರದಿಂದ ಎಸ್.ಐ.ಆರ್ ಪರಿಷ್ಕರಣೆಯ ಕಾರ್ಯದಲ್ಲಿ ಜಿಲ್ಲೆಯು ರಾಜ್ಯದ ಟಾಪ್ 5 ರೊಳಗೆ ಸ್ಥಾನ ಪಡೆದಿರುವುದು ಹೆಮ್ಮೆಯ ವಿಚಾರವಾಗಿದೆ. ಎಸ್. ಐ. ಆರ್. ಕುರಿತು ವ್ಯಾಪಕ ರೀತಿಯಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಸ್ಪರ್ಧೆಯಲ್ಲಿ ಸ್ವತಃ ಚಿತ್ರ ಬಿಡಿಸುವ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಡಾ.ದೀಲೀಷ್ ಶಶಿ ಸ್ಫೂರ್ತಿ ನೀಡಿದರು. ಕಾರ್ಯಕ್ರಮದಲ್ಲಿ ಜಿ. ಪಂ. ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ, ಸ್ಪರ್ಧೆಯ ನಿರ್ಣಾಯಕರಾದ ಚಿತ್ರಕಲಾ ಶಿಕ್ಷಕರಾದ ಸಂಜೀವ ಬಸವಾಡ, ಗಣೇಶ್ ವಾಜಂತ್ರಿ ಹಾಗೂ ಜಿಲ್ಲಾ ಪಂಚಾಯತ್ ಸಿಬ್ಬಂದಿಗಳು ಮತ್ತಿತರರು ಭಾಗಿಯಾಗಿದ್ದರು.