ವಿದ್ಯಾರ್ಥಿಗಳಿಗೆ ಜಲ ಸಂರಕ್ಷಣೆ, ಸ್ವಚ್ಛತೆ ಕುರಿತು ಜಾಗೃತಿ
Creating awareness among students about water conservation and cleanliness
ತಾಳಿಕೋಟಿ 01 : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪುರಸಭೆ ತಾಳಿಕೋಟಿ ವತಿಯಿಂದ ವಿದ್ಯಾರ್ಥಿಗಳಿಗೆ ಪರಿಸರ ರಕ್ಷಣೆ, ನೈರ್ಮಲ್ಯ ಹಾಗೂ ಆರೋಗ್ಯ ಜಾಗೃತಿ ಮೂಡಿಸುವ ಮಾಹಿತಿ, ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮವನ್ನು ಶನಿವಾರ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮಳೆನೀರು ಕೊಯ್ಲು, ಜಲ ಸಂಪನ್ಮೂಲಗಳ ರಕ್ಷಣೆ ಕುರಿತು ಜಲಾಂದೋಲನ ಹಾಗೂ ಅತಿಸಾರ ಭೇದಿ ತಡೆಗಟ್ಟುವಿಕೆ ಅಭಿಯಾನದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.
ಪುರಸಭೆ ಕಿರಿಯ ಆರೋಗ್ಯ ನೀರೀಕ್ಷಕ ಶಿವಾನಂದ ಜುಮನಾಳ ಅವರು ಮಳೆನೀರು ಸಂಗ್ರಹಣೆ, ಸ್ವಚ್ಛತೆ, ಘನ ತ್ಯಾಜ್ಯ ವಿಂಗಡಣೆ ಮತ್ತು ಮರುಬಳಕೆ ಕುರಿತು ಪ್ರಾಯೋಗಿಕ ಮಾಹಿತಿ ನೀಡಿದರು. ನೀರಿನಿಂದ ಹರಡುವ ರೋಗಗಳ ತಡೆ ಹಾಗೂ ಸ್ವಚ್ಛ ಪರಿಸರ ನಿರ್ಮಾಣದ ಕುರಿತು ವಿವರಿಸಿದರು. 2026-27ನೇ ಸಾಲನ್ನು “ತ್ಯಾಜ್ಯ ವಿಂಗಡಣೆ ವರ್ಷ” ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ, ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಮೂಲದಲ್ಲೇ ತ್ಯಾಜ್ಯ ಬೇರಿ್ಡಸುವ ಅಗತ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಭಾಗವಹಿಸಿ ಜಲ ಸಂರಕ್ಷಣೆ ಹಾಗೂ ಪಟ್ಟಣದ ಸ್ವಚ್ಛತೆಗೆ ಬದ್ಧರಾಗಿರುವುದಾಗಿ ಪ್ರತಿಜ್ಞೆ ಮಾಡಿದರು. ಪ್ರಾಂಶುಪಾಲ ಎಸ್.ಬಿ. ಸಾವಳಸಂಗ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಉಪನ್ಯಾಸಕರು, ಕಾಲೇಜು ಸಿಬ್ಬಂದಿ, ಪುರಸಭೆ ಹಿರಿಯ ಆರೋಗ್ಯ ನೀರೀಕ್ಷಕ ಫಿರೋಜ ಮುಲ್ಲಾ, ಕಿರಿಯ ಆರೋಗ್ಯ ನೀರೀಕ್ಷಕ ರಂಗನಾಥ ಅಜಮನಿ, ಕಂದಾಯ ನೀರೀಕ್ಷಕ ಶರಣಗೌಡ ಪಾಟೀಲ, ಪೌರಕಾರ್ಮಿಕ ಭೀಮಣ್ಣ ಬೋಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 