ಅಕ್ರಮವಾಗಿ ಜಿಲ್ಲೆ ಪ್ರವೇಶಿಸಿದರೇ ಕ್ರಿಮಿನಲ್ ಮೊಕದ್ದಮೆ: ಡಾ.ಬೊಮ್ಮನಹಳ್ಳಿ ಎಚ್ಚರಿಕೆ
ಬೆಳಗಾವಿ, ಮೇ14,ಕೇಂದ್ರ ಸರ್ಕಾರ ಆರಂಭಿಸಿರುವ 'ಸೇವಾಸಿಂಧು' ಆ್ಯಪ್ ಮೂಲಕ ಇ-ಪಾಸ್ ಪಡೆಯದೇ ನೆರೆ ರಾಜ್ಯಗಳಿಂದ ಕಾನೂನುಬಾಹಿರವಾಗಿ ಜಿಲ್ಲೆ ಪ್ರವೇಶಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದ್ದಾರೆ.ಸರ್ಕಾರದ ಮಾರ್ಗಸೂಚಿ ಅನುಸರಿಸದೇ ಕೆಲವರು ಅಡ್ಡದಾರಿಯಿಂದ ಜಿಲ್ಲೆಗೆ ಪ್ರವೇಶಿಸುತ್ತಿರುವುದು ಕಂಡುಬಂದಿದೆ.ಈ ರೀತಿಯ ಅಕ್ರಮವಾಗಿ ರಾಜ್ಯ ಪ್ರವೇಶಿಸುವುದು ಕಾನೂನು ಬಾಹಿರವಾಗಿದ್ದು, ಅಂತಹವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಸೇವಾಸಿಂಧು ಮೂಲಕ ಇ-ಪಾಸ್ ಪಡೆಯದೇ ಮಹಾರಾಷ್ಟ್ರ ಸೇರಿ ಇತರೆ ನೆರೆ ರಾಜ್ಯಗಳ ಮೂಲಕ ಯಾರಾದರೂ ಬೆಳಗಾವಿ ಜಿಲ್ಲೆ ಪ್ರವೇಶಿಸಿದ್ದರೆ ಅಂತಹವರು ಸ್ವಯಂಪ್ರೇರಣೆಯಿಂದ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ, ಪರೀಕ್ಷೆಗೆ ಒಳಪಡಬೇಕು. ಜತೆಗೆ, ಸಂಬಂಧಿಸಿದ ಪೊಲೀಸ್ ಠಾಣೆಗೂ ಮಾಹಿತಿ ನೀಡಬೇಕು. ಒಂದು ವೇಳೆ ಅಕ್ರಮ ಪ್ರವೇಶದ ವಿಷಯ ಮುಚ್ಚಿಟ್ಟಿರುವುದು ತಿಳಿದುಬಂದರೆ ಅಂತಹವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.ಇಂತಹವರ ವಿರುದ್ಧ ಸಾರ್ವಜನಿಕರು ಕೂಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಮ್ ಸಂಖ್ಯೆ 0831-2407290 ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿನು ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 