ಗದಗ - ಮುಂಡರಗಿ ತಾಲ್ಲೂಕಿನಲ್ಲಿ ಬೆಳೆ ಪರೀಶೀಲನೆ: ಬರ ಪರಿಸ್ಥಿತಿ ವರದಿ ಸಲ್ಲಿಸಲು ಸಚಿವ ಬಸವರಾಜ ರಾಯರಡ್ಡಿ ಸೂಚನೆ
Crop inspection in Gadag-Mundaragi taluk: Minister Basavaraj Rayareddy directs officials to submit a
ಗದಗ 7: ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಗದಗ ಹಾಗೂ ಮುಂಡರಗಿ ತಾಲ್ಲೂಕಿನ ಕೃಷಿ ಪ್ರದೇಶಗಳಿಗೆ ಸಚಿವ ಬಸವರಾಜ ರಾಯರಡ್ಡಿ ಶುಕ್ರವಾರ ಭೇಟಿ ನೀಡಿ ಬೆಳೆಗಳ ಸ್ಥಿತಿಗತಿಯನ್ನು ಪರೀಶೀಲಿಸಿದರು.
ಮೊದಲಿಗೆ ಗದಗ ತಾಲ್ಲೂಕಿನ ಗಂಗಿಮಡಿ ಗ್ರಾಮದ ಕೃಷಿ ಜಮೀನುಗಳಿಗೆ ಭೇಟಿ ನೀಡಿದ ಸಚಿವರು, ಶೇಂಗಾ, ಹೆಸರೆಕಾಳು ಹಾಗೂ ಮೆಣಸಿನಕಾಯಿ ಬೆಳೆಗಳ ಬೆಳವಣಿಗೆಯನ್ನು ವೀಕ್ಷಿಸಿದರು. ಮಳೆಯ ಕೊರತೆಯಿಂದ ಬೆಳೆಗಳು ಕುಂಠಿತಗೊಂಡಿರುವುದು, ತೇವಾಂಶದ ಅಭಾವದಿಂದ ಬೆಳೆಗೆ ಹಾನಿಯಾಗುತ್ತಿರುವ ಬಗ್ಗೆ ಕೃಷಿ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದೇ ವೇಳೆ ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ, ಬಿತ್ತನೆ ವೆಚ್ಚ, ನೀರಿನ ಲಭ್ಯತೆ ಹಾಗೂ ಬೆಳೆ ನಷ್ಟಕ್ಕೆ ಸಂಬಂಧಿಸಿದ ಅಹವಾಲುಗಳನ್ನು ಆಲಿಸಿದರು.
ಬಳಿಕ ಮುಂಡರಗಿ ತಾಲ್ಲೂಕಿನ ಮೇವುಂಡಿ ಗ್ರಾಮಕ್ಕೂ ಭೇಟಿ ನೀಡಿ, ಮೆಣಸಿನಕಾಯಿ ಹಾಗೂ ಇತರ ಬೆಳೆಗಳ ಸ್ಥಿತಿಯನ್ನು ಪರೀಶೀಲಿಸಿದರು. ಮಳೆಯ ಅಭಾವ ಮುಂದುವರಿದರೆ ಇನ್ನಷ್ಟು ಹಾನಿಯಾಗುವ ಸಾಧ್ಯತೆ ಇರುವುದಾಗಿ ಅಧಿಕಾರಿಗಳು ಸಚಿವರಿಗೆ ವಿವರಿಸಿದರು.
ಈ ಸಂದರ್ಭದಲ್ಲಿ ಶಾಸಕರು, ಜಿಲ್ಲಾಧಿಕಾರಿ, ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ರೈತರು ಉಪಸ್ಥಿತರಿದ್ದರು. ಅಧಿಕಾರಿಗಳೊಂದಿಗೆ ಸ್ಥಳದಲ್ಲಿಯೇ ಚರ್ಚಿಸಿದ ಸಚಿವರು, ಬರ ಪರಿಸ್ಥಿತಿಯ ಮೇಲೆ ನಿರಂತರ ನಿಗಾ ವಹಿಸಿ ರೈತರಿಗೆ ಅಗತ್ಯ ತಾಂತ್ರಿಕ ಸಲಹೆ ಮತ್ತು ಸಹಕಾರ ನೀಡುವಂತೆ ಸೂಚಿಸಿದರು.
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು 