ವಿಜಯನಗರ

ಗ್ಯಾರಂಟಿ ಯೋಜನೆಗಳಿಂದ ಜಿಲ್ಲೆಗೆ ಕೋಟಿ ನೆರವು: ಪಿ.ಟಿ. ಪರಮೇಶ್ವರ್

ಗ್ಯಾರಂಟಿ ಯೋಜನೆಗಳಿಂದ ಜಿಲ್ಲೆಗೆ ಕೋಟಿ ನೆರವು: ಪಿ.ಟಿ. ಪರಮೇಶ್ವರ್

ವಿಜಯನಗರ (ಹೊಸಪೇಟೆ), ಆಗಸ್ಟ್‌ 4: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಡಿ ಕಳೆದ ಮೂರು ವರ್ಷಗಳಲ್ಲಿ ಸರ್ಕಾರದ ಖಜಾನೆಯಿಂದ ನೇರವಾಗಿ ಸಾರ್ವಜನಿಕರ ಖಾತೆಗಳಿಗೆ ಒಟ್ಟು ?2,944 ಕೋಟಿ ಅನುದಾನವನ್ನು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ಪಾವತಿಸಲಾಗಿದೆ ಎಂದು ಗ್ಯಾರಂಟಿ ಸಮಿತಿ ರಾಜ್ಯ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ್ ತಿಳಿಸಿದರು.  

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರಲ್ಲಿ ರಾಜ್ಯ ಸರ್ಕಾರ ಘೋಷಿಸಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಅನುಷ್ಠಾನಗೊಳಿಸಿ, ರಾಜ್ಯದ ಕಟ್ಟಕಡೆಯ ವ್ಯಕ್ತಿಗೂ ಯೋಜನೆಗಳ ಸೌಲಭ್ಯ ತಲುಪಿಸುವ ಉದ್ದೇಶ ಹೊಂದಲಾಗಿದೆ ಎಂದರು.  ಯೋಜನೆಗಳ ಅನುಷ್ಠಾನದಲ್ಲಿ ಕಂಡುಬಂದಿರುವ ಕೆಲವು ಲೋಪಗಳನ್ನು ಸರಿಪಡಿಸಿ, ಇನ್ನಷ್ಟು ಪರಿಣಾಮಕಾರಿಯಾಗಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.  


ಸುದ್ದಿ ಓದಿ