ಮನರಂಜನೆ

ಕ್ರೂಸ್ ಡ್ರಗ್ಸ್ ಪ್ರಕರಣ: ವಿಚಾರಣೆಗೆ ಹಾಜರಾಗದ ನಟಿ ಅನನ್ಯ ಪಾಂಡೆ

ಕ್ರೂಸ್ ಡ್ರಗ್ಸ್ ಪ್ರಕರಣ: ವಿಚಾರಣೆಗೆ ಹಾಜರಾಗದ ನಟಿ ಅನನ್ಯ ಪಾಂಡೆ

ಮುಂಬೈ: ಅ, 25  ಬಾಲಿವುಡ್ ನಟಿ ಅನನ್ಯ ಪಾಂಡೆ ಸೋಮವಾರ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋಗೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದ್ರೆ ಅವರು ಬಂದಿಲ್ಲ ಎಂದು ಎನ್​​ಸಿಬಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.


ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರ್ಯನ್ ಖಾನ್ ಜೊತೆ ವಾಟ್ಸಾಪ್ ಚಾಟ್ ಮಾಡಿದ ಆರೋಪವನ್ನು ಈ ನಟಿ ಎದುರಿಸುತ್ತಿದ್ದಾರೆ. ಪಾಂಡೆಯನ್ನು ಕಳೆದ ವಾರ ಎರಡು ದಿನಗಳ ಕಾಲ ಎನ್‌ಸಿಬಿ ವಿಚಾರಣೆಗೆ ಒಳಪಡಿಸಿತ್ತು ಮತ್ತು ಸೋಮವಾರ ಮತ್ತೆ ವಿಚಾರಣೆಗೆ ಬರುವಂತೆ ಸೂಚಿಸಲಾಗಿತ್ತು.


ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಟಿ ಅನನ್ಯ ಪಾಂಡೆ ಎನ್​ಸಿಬಿ ಮುಂದೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದ್ರೆ ಅವರು ಬಂದಿಲ್ಲ.


ಕ್ರೂಸ್ ಹಡಗು ಡ್ರಗ್ಸ್ ಪ್ರಕರಣವನ್ನು ಎನ್ ಸಿಬಿ ತನಿಖೆ ನಡೆಸುತ್ತಿದ್ದು, ಇದರಲ್ಲಿ ಆರ್ಯನ್ ಖಾನ್ (23) ಹಾಗೂ ಇತರ 19 ಜನರನ್ನು ಬಂಧಿಸಲಾಗಿದೆ. ಆರ್ಯನ್ ಖಾನ್ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿ ಜೈಲಿನಲ್ಲಿದ್ದಾನೆ ಮತ್ತು ಅವರ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ಮಂಗಳವಾರ ವಿಚಾರಣೆ ಮಾಡುವ ಸಾಧ್ಯತೆಯಿದೆ.


ಪ್ರಕರಣದ ತನಿಖೆಯ ಸಮಯದಲ್ಲಿ, ಆರ್ಯನ್ ಖಾನ್ ಮತ್ತು ಪಾಂಡೆ ನಡುವೆ ವಾಟ್ಸಾಪ್ ಚಾಟ್‌ಗಳನ್ನು ಎನ್‌ಸಿಬಿ ಪತ್ತೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಸುದ್ದಿ ಓದಿ