ಹೂವಿನ ಹಡಗಲಿ

ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಿ: ವಕೀಲ ಕೊಟ್ರೇಶ ಸಲಹೆ

ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಿ: ವಕೀಲ ಕೊಟ್ರೇಶ ಸಲಹೆ

ಹೂವಿನಹಡಗಲಿ 23: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳುವ ಮೂಲಕ ಉತ್ತಮ ದೈಹಿಕ ಮತ್ತು ಮಾನಸಿಕ ಸದೃಢತೆ ಹೊಂದಬೇಕು ಎಂದು ಅಟವಾಳಗಿ ಕೊಟ್ರೇಶ ಸಲಹೆ ನೀಡಿದರು. 

ಪಟ್ಟಣದ ರುದ್ರಾಂಬ ಎಂ.ಪಿ.ಪ್ರಕಾಶ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ 12ನೇ ಅಂತರ್ ಮಹಾ ವಿದ್ಯಾಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಕುಸ್ತಿ ಜುಡೋ ಪಂದ್ಯಾವಳಿಯಲ್ಲಿ ಭಾಗವಹಿಸಿ ಮಾತನಾಡಿ ಶಿಕ್ಷಣದ ಜತೆಗೆ ಕ್ರೀಡೆಗಳಿಗೂ ಯುವ ಜನಾಂಗ ಆದ್ಯತೆ ಕೊಡಬೇಕು ಈಚೆಗೆ ವಿದ್ಯಾರ್ಥಿಗಳಲ್ಲಿ ಕ್ರೀಡೆ ಬಗ್ಗೆ ಆಸಕ್ತಿ ಇಲ್ಲ ಎಂದರು. 

ಕಾರ್ಯಕ್ರಮ ಉದ್ಘಾಟಿಸಿದ ಪುರಸಭೆ ಅಧ್ಯಕ್ಷ ಜ್ಯೋತಿಮಲ್ಲಣ್ಣ ಮಾತನಾಡಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಕಾಲೇಜಿಗೆ ಮೂಲಭೂತ ಸೌಲಭ್ಯವನ್ನು ಕಲ್ಪಿಸಲಾಗಿದೆ.ಕಾಲೇಜಿನಲ್ಲಿ ನಡೆಯುವ ಕಾರ‌್ಯಕ್ರಮಕ್ಕೆ ನಮ್ಮ ಸಹಕಾರ ಕೊಡುವುದಾಗಿ ಹೇಳಿದರು.ನಿವೃತ್ತ ದೈಹಿಕ ಶಿಕ್ಷಕ ಟಿ.ಜಾತಪ್ಪ,ಹೆಚ್‌.ಕೊಟ್ರೇಶ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ವಿಜಯಕುಮಾರ ಅಧ್ಯಕ್ಷತೆ ವಹಿಸಿ ಮಾತನಾಡಿ ಕಳೆದ ಎರಡು ವರ್ಷದಿಂದ ಶಿಕ್ಷಣ ಕುಂಠಿತವಾಗಿದೆ. ಮಕ್ಕಳಲ್ಲಿ ಹೆಚ್ಚಾಗಿ ಮೊಬೈಲ್ ಬಳಕೆಯಿಂದ ಕ್ರೀಡೆಗಳ ಬಗ್ಗೆ ಆಸಕ್ತಿ ಕೊರತೆ ಇದೆ ಎಂದರು.ಉಪನ್ಯಾಸಕರಾದ ಮಲ್ಲಿಕಾರ್ಜುನ,ರಮೇಶ, ಶಿವಾನಂದ, 


ಸುದ್ದಿ ಓದಿ