ಗದಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಮನೋಭಾವ ಬೆಳೆಸಿಕೊಳ್ಳಿ

ಗದಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಮನೋಭಾವ ಬೆಳೆಸಿಕೊಳ್ಳಿ Cultivate the spirit of the Gadag district-level Dasara sports meet


ಗದಗ  23: ಕ್ರೀಡಾಪಟುಗಳು ಕ್ರೀಡಾ ಮನೋಭಾವ ಬೆಳೆಸಿಕೊಂಡು ಉತ್ಸಾಹದಿಂದ ದಸರಾ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕೆಂದು ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್ ತಿಳಿಸಿದರು.ಗದಗ ಜಿಲ್ಲಾಡಳಿತ. ಜಿಲ್ಲಾ ಪಂಚಾಯತ. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಗರದ ಕೆ.ಎಚ್‌.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಏರಿ​‍್ಡಸಲಾಗಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ದಸರಾ ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳುಗಳು ಪಾಲ್ಗೊಂಡು ಗದಗ ಜಿಲ್ಲೆಗೆ ಕೀರ್ತಿ ತರಬೇಕೆಂದರು. ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಕ್ರೀಡಾ ಸ್ಪೂರ್ತಿಯಿಂದ ಹಾಗೂ ಹುಮ್ಮಸ್ಸಿನಿಂದ ಭಾಗವಹಿಸುವುದು ಅತ್ಯಂತ ಮುಖ್ಯ. ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ದಸರಾ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕೆಂದು ಸಲಹೆ ಮಾಡಿದರು.  

ಕ್ರೀಡಾ ಮತ್ತು ಯುವ ಸಬಲೀಕರಣ  ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೊಗೇರಿ ಅವರು ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಪ್ರತಿ ವರ್ಷ ದಸರಾ ಕ್ರೀಡಾಕೂಟಗಳನ್ನು ಆಯೋಜನೆ ಮಾಡಲಾಗುತ್ತದೆ. ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳು ಸೆಪ್ಟೆಂಬರ್ 23 ಮತ್ತು 24 ರಂದು ಎರಡು ದಿನಗಳ ಕಾಲ ನಡೆಯುತ್ತಿವೆ.

ರಾಜ್ಯದಲ್ಲಿ ಬೆಂಗಳೂರನ್ನು ಹೊರತುಪಡಿಸಿದರೆ ಗದಗ ಜಿಲ್ಲೆಯು ಹೆಚ್ಚಿನ ಕ್ರೀಡಾ ಸೌಲಭ್ಯಗಳನ್ನು ಹೊಂದಿರುವಂತಹ ಜಿಲ್ಲೆಯಾಗಿದೆ ಎಂಬುದು ಸಂತಸದ ವಿಷಯವಾಗಿದೆ. ಜಿಲ್ಲೆಯ ಕ್ರೀಡಾಪಟುಗಳು ವಿಭಾಗ ಮಟ್ಟದಲ್ಲಿ ಹಾಗೂ ರಾಜ್ಯ ಮಟ್ಟದಲ್ಲಿ ಭಾಗವಹಿಸಿ ಗದಗ ಜಿಲ್ಲೆಯ ಕೀರ್ತಿ ಹೆಚ್ಚಿಸಬೇಕೆಂದರು. 

ಕಾರ್ಯಕ್ರಮದಲ್ಲಿ ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್‌. ಮುಂಡರಗಿ, ಯೋಗಗುರು ಕೆ.ಎಸ್‌.ಪಲ್ಲೇದ, ಶ್ರೀಮತಿ ಗಾಯತ್ರಿ, ಪಿ.ಕೆ.ಅವರಡ್ಡಿ, ಎಂ.ವಿ.ಪಾಟೀಲ, ಎಲ್‌.ಡಿ.ಪಾಟೀಲ, ವೈ.ಕೆ.ಚೌಡಾಪುರ , ಜಿಲ್ಲಾ ಹಾಗೂ ತಾಲೂಕಾ ದೈಹಿಕ ಶಿಕ್ಷಣಾಧಿಕಾರಿಗಳು , ಕ್ರೀಡಾ ಅಸೋಸಿಯೇಶ್‌ನದ ಅಧ್ಯಕ್ಷರು, ಕ್ರೀಡಾಪಟುಗಳು , ಹಾಜರಿದ್ದರು.ವೆಂಕಟೇಶ ಅಲ್ಕೋಡ ರಾಷಿೊಥಯ ಗೀತೆ ಹಾಗೂ ನಾಡಗೀತೆ ಪ್ರಸ್ತುತಪಡಿಸಿದರು. ಎಂ.ಎಸ್‌.ಕುಚಬಾಳ ಕಾರ್ಯಕ್ರಮ ನಿರೂಪಿಸಿದರು. ಚಂದ್ರಶೇಖರ ಮೇಲಿನಮನಿ ವಂದಿಸಿದರು.