ಶಿಕ್ಷಣದೊಂದಿಗೆ ಸಂಸ್ಕೃತಿ ಅಗತ್ಯವಿದೆ: ಚಂದ್ರಶೇಖರ ಶಿವಾಚಾರ್ಯ ಶ್ರೀ
ಬೆಳಗಾವಿ, 24: ನಾನು ಇಂಗ್ಲೀಷ್ ಭಾಷೆಯ ವಿರೋಧಿಯಲ್ಲ. ಇಂಗ್ಲೀಷ ಸಂಸ್ಕೃತಿಯ ವಿರೋಧಿ. ಪಾಲಕರು ಶಿಕ್ಷಣದೊಂದಿಗೆ ನಾಡಿನ ಸಂಸ್ಕೃತಿಯನ್ನು ಕಲಿಸುವ ಅಗತ್ಯವಿದೆ ಎಂದು ಹುಕ್ಕೇರಿ ಹಿರೇಮಠದ ಪರಮಪೂಜ್ಯ ಚಂದ್ರಶೇಖರ ಶಿವಾಚಾರ್ಯ ಶ್ರೀಗಳು ಹೇಳಿದರು.
ನಗರದ ಲಿಂಗಾಯತ ಭವನದಲ್ಲಿ ಶನಿವಾರ ಶ್ರಾವಣ ಮಾಸದ ನಿಮಿತ್ಯ ಲಿಂಗಾಯತ ಮಹಿಳಾ ಸಮಾಜದ ವತಿಯಿಂದ ಉಡಿ ತುಂಬುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ,
ಪ್ರೇಮಕ್ಕಿಂತ ದೊಡ್ಡದಾದ ಮಂತ್ರವಿಲ್ಲ, ಪ್ರೇಮಕ್ಕಿಂತ ದೊಡ್ಡದಾದ ದೇವರಿಲ್ಲ. ಆದ್ದರಿಂದ ಎಲ್ಲರನ್ನು ಪ್ರೀತಿಸುವುದನ್ನು ಕಲಿಯಬೇಕು. ಆದ್ದರಿಂದ ಶ್ರಾವಣ ಮಾಸದಲ್ಲಿ ಒಳ್ಳೆಯ ವಿಚಾರಗಳನ್ನ ಕೇಳುತ್ತಾ. ಒಳ್ಳೆಯ ಚಿಂತನೆಗಳ ಕಡೆಗೆ ನೀವೆಲ್ಲಾ ಸಾಗಬೇಕು ಎಂದು ಶ್ರೀಗಳು ಕರೆ ನೀಡಿದರು.
ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ವತಿಯಿಂದ ಮಹಿಳೆಯರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ್ದು ವಿಶೇಷವಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯಶೀಲಾ ಬ್ಯಾಕೋಡ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಕುಮಾರಿ ಅಂಬಿಕಾ, ಲಿಂಗಾಯತ ಮಹಿಳಾ ಸಮಾಜದ ಅಧ್ಯಕ್ಷೆ ಜಯಶೀಲಾ ಬ್ಯಾಕೋಡ, ಶೈಲಜಾ ಭಿಂಗೆ, ಮಧು ಪಟ್ಟಣಶೆಟ್ಟಿ, ಅನು ಮೆಳವಂಕಿ, ಮಧು ಪಟ್ಟಣಶೆಟ್ಟಿ, ಮಾಧವಿ ಸಂಬರಗಿ, ಕಾವೇರಿ ಕಿಲಾರಿ, ಸುರೇಖಾ ಮುಮ್ಮಿಗಟ್ಟಿ, ಸುಧಾ ಪಾಟೀಲ, ಡಾ.ಹೇಮಾ ಸೂನಳ್ಳಿ, ಇಂದಿರಾ ದೊಟೆಬೆನ್ನೂರ, ಸವಿತಾ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 