ವಿಜಯಪುರದಲ್ಲಿ ಸೈಕ್ಲಿಂಗ್ ಕ್ರೀಡಾಕೂಟಗಳಿಗೆ ಉತ್ತೇಜನ
Cycling events promoted in Vijayapura
ವಿಜಯಪುರ ಸೆ.5: ಸೈಕ್ಲಿಂಗ್ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡಿರುವ ವಿಜಯಪುರದಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಕ್ರೀಡಾಕೂಟಗಳು ಯಶಸ್ವಿಯಾಗಿ ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಅಂತರರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಕ್ರೀಡಾಕೂಟ ಆಯೋಜಿಸುವ ಅವಕಾಶ ಜಿಲ್ಲೆಗೆ ದೊರೆತರೆ, ಅದರ ಯಶಸ್ಸಿಗೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಅಗತ್ಯ ಸಹಕಾರ ನೀಡಲಿದ್ದಾರೆ ಎಂದು ಸಂಸದ ರಮೇಶ ಜಿಗಜಿಣಗಿ ಭರವಸೆ ನೀಡಿದರು.
ಕೇಂದ್ರ ಸರ್ಕಾರದ ಖೇಲೋ ಇಂಡಿಯಾ, ಫಿಟ್ ಇಂಡಿಯಾ, ಡ್ರಗ್ಸ್ ಮುಕ್ತ ಭಾರತ ಅಭಿಯಾನ, ಸೈಕ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಕರ್ನಾಟಕ ರಾಜ್ಯ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಸಹಯೋಗದಲ್ಲಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಆರಂಭವಾದ ಅಸ್ಮಿತಾ ವುಮೆನ್ಸ್ ರೋಡ್ ಲೀಗ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಿಜಯಪುರ ಜಿಲ್ಲೆಯ ಸೈಕ್ಲಿಸ್ಟ್ಗಳು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಆತಿಥ್ಯ ವಹಿಸಲು ಅಗತ್ಯ ಸಹಕಾರ ನೀಡುವುದಾಗಿ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮೇಯರ್ ಎಂ.ಎಸ್. ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ ಸೇರಿದಂತೆ ಸೈಕ್ಲಿಂಗ್ ಫೆಡರೇಷನ್ ಆಫ್ ಇಂಡಿಯಾದ ತಾಂತ್ರಿಕ ಅಧಿಕಾರಿಗಳು, ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 