ಸಿಲಿಂಡರ್ ಅಭಾವ: ಆತ್ಮಹತ್ಯೆ ಮಾಡಿಕೊಂಡ ಹೋಟೆಲ್ ಮಾಲೀಕ
Cylinder Abhav: A hotelier who commits suicide
ಬೆಳಗಾವಿ 24: ಅಡುಗೆ ಅನಿಲದ ಅಭಾವದಿಂದ ಹೋಟೆಲ್ ನಡೆಸುವುದು ದುಸ್ತರವಾಗಿದ್ದು, ಇದರಿಂದ ಮನನೊಂದ ವ್ಯಕ್ತಿಯೊಬ್ಬರು ತಮ್ಮ ಹೊಟೆಲಿನಲ್ಲಿಯೇ ನೇಣು ಹಾಕಿಕೊಂಡು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ನಡೆದಿದೆ.
ಹನುಮಾನ ಹೋಟೆಲ್ ಮಾಲೀಕ ರಾಮ ಹಳ್ಳೂರಿ (50) ಆತ್ಮಹತ್ಯೆಗೆ ಶರಣರಾಗಿದ್ದಾರೆ. ಮಂಗಳವಾರ ಮುಂಜಾನೆ ರಾಮ ಹಳ್ಳೂರಿ ತಾನು ನಡೆಸುತ್ತಿದ್ದ ಹೋಟೆಲ್ ತೆರೆದು ಹಗ್ಗದಿಂದ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ. ಅಡುಗೆ ಅನಿಲ ಅಭಾವದಿಂದ ರಾಮ ಹಳ್ಳೂರಿ ವ್ಯಾಪಾರವಿಲ್ಲದೆ ಸಾಲವನ್ನೂ ತೀರಿಸುವುದು ಹೇಗೆಂಬ ಚಿಂತೆಯಲ್ಲಿ ಕಂಗೆಟ್ಟಿದ್ದರು ಎನ್ನಲಾಗಿದೆ.
ರಾಮ ಹಳ್ಳೂರಿಯವರ ಮಗ ಉದಯ ಹಳ್ಳೂರಿ ಮಾಧ್ಯಮಗಳೊಂದಿಗೆ ಮಾತನಾಡಿ ಕಳೆದ ಒಂದು ವಾರದಿಂದ ಅಡುಗೆ ಅನಿಲ ಅಭಾವದಿಂದಾಗಿ ವ್ಯಾಪಾರ ಕುಂಟಿತಗೊಂಡಿತ್ತು, ಪ್ರತಿ ದಿನ ಹೋಟೆಲ್ ಬಾಡಿಗೆ ಮತ್ತು ಸಾಲದ ಮೊತ್ತ ನೀಡಲು ತೊಂದರೆಯಾಗಿತ್ತು ಇದರಿಂದ ಬೇಸತ್ತು ಮಾನಸಿಕ ಸ್ಥಿಮಿತ ಕಳೆದುಕೊಂಡು ಇಂದು ಮುಂಜಾನೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 