ಡಿ. 1 ರಿಂದ 30 ರ ವರೆಗೆ ತೆರಿಗೆ ವಸೂಲಾತಿ ವಿಶೇಷ ಅಭಿಯಾನ : ತಾಪಂ ಇಓ ಚಂದ್ರಶೇಖರ
ರೋಣ 09: ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಡಿಸೆಂಬರ್ 1 ರಿಂದ 30 ರ ವರೆಗೆ “ತೆರಿಗೆ ವಸೂಲಾತಿ ವಿಶೇಷ ಅಭಿಯಾನ” ಹಮ್ಮಿಕೊಳ್ಳಲಾಗಿದೆ ಈ ಹಿನ್ನೆಲೆ ಇನ್ನು ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ವಸೂಲಾತಿ ಮಾಡುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯತಿಗೆ ನೋಡಲ್ ಅಧಿಕಾರಿಗಳನ್ನು ನೇಮಸಿ ಆದೇಶ ಹೊರಡಿಸಿಲಾಗಿದೆ ಎಂದು ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ ಕಂದಕೂರ ಹೇಳಿದರು.
ತಾಲೂಕಿನ ಡ.ಸ.ಹಡಗಲಿ ಗ್ರಾಮ ಪಂಚಾಯತಿಗೆ ಕರ ವಸೂಲಾತಿ ಅಭಿಯಾನ ಮತ್ತು ಮನರೇಗಾ ಕಾಮಗಾರಿ ಪರಿಶಿಲನೆಗೆ ಆಗಮಿಸಿದ ಸಂದರ್ಭದಲ್ಲಿ ಪಂಚಾಯತ ಸಿಬ್ಬಂದಿಗಳ ಜೊತೆಗೆ ತೆರಿಗೆ ವಸೂಲಾತಿ ಕುರಿತು ಚರ್ಚಿಸಿದರು. ದಿನಾಂಕ 11/12/2024 ರಂದು ಕರ ವಸೂಲಾತಿ ವಿಶೇಷ ಅಭಿಯಾನವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದು ಆ ದಿನ ಗ್ರಾಮ ಪಂಚಾಯತಿ ಕರ ವಸೂಲಿಗಾರರು ಮುಂಜಾನೆ 7 ಘಂಟೆಗೆ ಗ್ರಾಮ ಪಂಚಾಯತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜೊತೆಗೂಡಿ ಮನೆ ಮನೆಗೆ ಭೇಟಿ ನೀಡಿ ಹೆಚ್ಚಿನ ಮಟ್ಟದಲ್ಲಿ ತೆರಿಗೆ ವಸೂಲಿ ಮಾಡಬೇಕು.
ಎಲ್ಲರೂ ತಾಲೂಕಿನ ಪ್ರಗತಿಗೆ ಹಾಗೂ ಗ್ರಾಮದ ಪ್ರಗತಿಗೆ ಹೆಚ್ಚಿನ ಒತ್ತು ಕೊಡಿ ಎಂದರು. ಗ್ರಾಮ ಪಂಚಾಯಿತಿಗೆ ಸಲ್ಲಿಕೆ ಆಗಬೇಕಾಗಿರುವ ತೆರಿಗೆಯಲ್ಲಿ ಶೇ.100ರಷ್ಟು ವಸೂಲಿ ಮಾಡುವುದು ಗ್ರಾಮ ಪಂಚಾತಿಯ ಪ್ರಾಥಮಿಕ ಹೊಣೆಗಾರಿಕೆಯಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಕ್ರೋಢೀಕರಿಸಿಕೊಳ್ಳಿ ಅಂದಾಗ ಗ್ರಾಮದ ಅಭಿವೃದ್ಧಿ ಸಾಧ್ಯ ಎಂದರು.ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕರ ವಸೂಲಾತಿ ಅಭಿಯಾನವನ್ನು ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು, ನೀರಗಂಟಿಗಳು ಗ್ರಾಮ ಪಂಚಾಯತ ಸಿಬ್ಬಂದಿಗಳು ಜೊತೆಗೆ ಸೇರಿಕೊಂಡು ಕರ ವಸೂಲಾತಿಯನ್ನು, ಮನೆಗಳು, ಅಂಗಡಿ ಮುಂಗಟ್ಟು, ಮಳಿಗೆಗಳಿಗೆ ತೆರಳಿ ಕರ ವಸೂಲಾತಿ ಕೈಗೊಂಡು ಅಭಿಯಾನ ಯಶಸ್ವಿಗೊಳಿಸಲು ಸಹಕಾರ ನೀಡಿದರೆ ನಿಗದಿತ ಗುರಿಯನ್ನು ಸಾಧಿಸಬಹುದು ಎಂದರು.
ಈ ಸಂದರ್ಭದಲ್ಲಿ ಡ.ಸ ಹಡಗಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗಂಗಾಧರ ಕಮ್ಮಾರ, ಗ್ರಾಮ ಪಂಚಾಯತಿ ಸದಸ್ಯರು, ಅಭಿವೃದ್ಧಿ ಅಧಿಕಾರಿ ಈಶ್ವರಗೌಡ ಪಾಟೀಲ, ತಾಲೂಕ ಪಂಚಾಯತ ತಾಂತ್ರಿಕ ಸಂಯೋಜಕ ಪ್ರವೀಣ ಸೂಡಿ ಸೇರಿದಂತೆ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.