ಡಿ.ಕೆ. ಶಿವಕುಮಾರ್ ಪ್ರಮಾಣವಚನ ವೀಕ್ಷಣೆಗೆ ಬೆಳಗಾವಿಯಲ್ಲಿ ಬೃಹತ್ ವ್ಯವಸ್ಥೆ : ಕಾಂಗ್ರೆಸ್ ಭವನದ ಎದುರು ಎಲ್‌ಇಡಿ ಪರದೆ; ಬಳಿಕ ಚನ್ನಮ್ಮ ವೃತ್ತದಲ್ಲಿ ವಿಜಯೋತ್ಸವ
D.K. Shivakumar's oath-taking ceremony witnessed in Belgaum: LED screen in front of Congress Bhavan;
ಬೆಳಗಾವಿ 03: ರಾಜ್ಯ ರಾಜಕೀಯದಲ್ಲಿ ಐತಿಹಾಸಿಕ ಕ್ಷಣವೆಂದು ಪರಿಗಣಿಸಲಾಗುತ್ತಿರುವ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಸಾರ್ವಜನಿಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಒಟ್ಟಾಗಿ ವೀಕ್ಷಿಸಲು ಬೆಳಗಾವಿಯಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಭವನದ ಎದುರು ಬೃಹತ್ ಎಲ್‌ಇಡಿ ಪರದೆ ಅಳವಡಿಸಲಾಗಿದ್ದು, ಬುಧವಾರ ಮಧ್ಯಾಹ್ನ 3 ಗಂಟೆಯಿಂದ ಪ್ರಮಾಣವಚನ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಬೆಳಗಾವಿ ನಗರ ಹಾಗೂ ಗ್ರಾಮೀಣ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಮತ್ತು ಅಭಿಮಾನಿಗಳು ಭಾಗವಹಿಸುವ ನೀರೀಕ್ಷೆಯಿದೆ.ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸುತ್ತಿರುವ ಈ ಐತಿಹಾಸಿಕ ಕ್ಷಣವನ್ನು ಸಂಭ್ರಮದಿಂದ ಆಚರಿಸಲು ಪಕ್ಷದ ಕಾರ್ಯಕರ್ತರು ಈಗಾಗಲೇ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ನೇರ ಪ್ರಸಾರದ ವೇಳೆ ಕಾರ್ಯಕರ್ತರು ಪಕ್ಷದ ಧ್ವಜಗಳು ಹಾಗೂ ಬ್ಯಾನರ್‌ಗಳೊಂದಿಗೆ ಭಾಗವಹಿಸಿ ಸಂಭ್ರಮಾಚರಣೆ ನಡೆಸಲಿದ್ದಾರೆ.
ಚನ್ನಮ್ಮ ವೃತ್ತದಲ್ಲಿ ಭವ್ಯ ವಿಜಯೋತ್ಸವ* ಪ್ರಮಾಣವಚನ ಸಮಾರಂಭದ ನೇರ ಪ್ರಸಾರ ಮುಗಿದ ಬಳಿಕ ಕಾಂಗ್ರೆಸ್ ಭವನದಿಂದ ನಗರದ ಚನ್ನಮ್ಮ ವೃತ್ತದವರೆಗೆ ಮೆರವಣಿಗೆ ಆಯೋಜಿಸಲಾಗಿದೆ. ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.ಚನ್ನಮ್ಮ ವೃತ್ತದಲ್ಲಿ ವಿಶೇಷ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅಲ್ಲಿ ಡಿ.ಕೆ. ಶಿವಕುಮಾರ್ ಅವರ ಬೃಹತ್ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ನೆರವೇರಿಸಲಾಗುವುದು. ಜೊತೆಗೆ ಸಿಹಿ ಹಂಚಿ, ಸಂಭ್ರಮಾಚರಣೆ ಮೂಲಕ ಹೊಸ ಸರ್ಕಾರಕ್ಕೆ ಶುಭ ಹಾರೈಸಲಾಗುವುದು. *ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ ಈ ಕುರಿತು ಪ್ರಕಟಣೆ ನೀಡಿರುವ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ರಾಜ್ಯದ ಅಭಿವೃದ್ಧಿ ಮತ್ತು ಜನಪರ ಆಡಳಿತಕ್ಕೆ ಹೊಸ ದಿಕ್ಕು ನೀಡಲಿರುವ ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭವನ್ನು ಎಲ್ಲರೂ ಒಟ್ಟಾಗಿ ವೀಕ್ಷಿಸಿ ಸಂಭ್ರಮಿಸಬೇಕು ಎಂದು ಕರೆ ನೀಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ.ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಈಗಾಗಲೇ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಬುಧವಾರ ನಗರದಲ್ಲಿ ಭರ್ಜರಿ ಸಂಭ್ರಮಾಚರಣೆ ನಡೆಯುವ ಸಾಧ್ಯತೆ ಇದೆ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 