ವಿದ್ಯುತ್ ಗ್ರಿಡ್ ನಲ್ಲಿ ದೋಷ – ಪೂರ್ಣ ಕತ್ತಲಲ್ಲಿ ಮುಳುಗಿದ ಪಾಕಿಸ್ತಾನ
ಇಸ್ಲಾಮಾಬಾದ್, ಜ 10 : ಪಾಕಿಸ್ತಾನದ ರಾಷ್ಟ್ರೀಯ ಪವರ್ ಗ್ರಿಡ್ ನಲ್ಲಿ ಹಠಾತ್ ತಾಂತ್ರಿಕ ದೋಷ ಕಂಡು ಬಂದ ಕಾರಣ, ಇಡಿ ದೇಶವೇ ಕತ್ತಲಲ್ಲಿ ಮುಳುಗಿದ ಘಟನೆ ವರದಿಯಾಗಿದೆ. ಈ ಕುರಿತು ಮಾಹಿತಿ ನೀಡಿದ ಪಾಕ್ ಇಂಧನ ಸಚಿವ ಒಮರ್ ಅಯೂಬ್ ಖಾನ್, ವಿದ್ಯುತ್ ಪ್ರಸರಣ ವ್ಯವಸ್ಥೆಯಲ್ಲಿನ ಆವರ್ತನದಲ್ಲಿ ಹಠಾತ್ ಕುಸಿತದಿಂದಾಗಿ ದೇಶಾದ್ಯಂತ ವಿದ್ಯುತ್ ವ್ಯತ್ಯಯವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.ಪಾಕಿಸ್ತಾನದ ಪ್ರಮುಖ ನಗರಗಳಾದ ಕರಾಚಿ, ಲಾಹೋರ್, ರಾವಲ್ಪಿಂಡಿ, ಮುಲ್ತಾನ್ ಸೇರಿದಂತೆ ಪ್ರಮುಖ ನಗರಗಳಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿ, ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ) ಭಾಗದಲ್ಲೂ ವ್ಯತ್ಯಯವಾಗಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದ್ದು, ಸದ್ಯ ತಾಂತ್ರಿಕ ದೋಷ ನಿವಾರಣೆಗೆ ಪಾಕಿಸ್ತಾನದ ರಾಷ್ಟ್ರೀಯ ಪವರ್ ಗ್ರಿಡ್ ಮುಂದಾಗಿದ್ದು, ಶೀಘ್ರದಲ್ಲೇ ವಿದ್ಯುತ್ ಸೇವೆ ದೊರೆಯಲಿದೆ ಎಂದೂ ಸಚಿವ ಒಮರ್ ಅಯೂಬ್ ಖಾನ್ ಭರವಸೆ ನೀಡಿದ್ದಾರೆ.