ಅಲೆಮಾರಿ ಜನಾಂಗ ಸೌಲಭ್ಯಗಳ ಸದ್ಭಳಕೆಗೆ ಜಿಲ್ಲಾಧಿಕಾರಿ ಕರೆ
DC calls for better utilization of facilities for nomadic community
ಗದಗ 25: ಸರ್ಕಾರದಿಂದ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ವಿವಿಧ ಯೋಜನೆಗಳು ಜಾರಿಯಾಗಿದ್ದು ಅವುಗಳ ಸೌಲಭ್ಯ ಸಮರ್ಕ ರೀತಿಯಲ್ಲಿ ದೊರಕುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರ ಸಲಹಾ ಸಮಿತಿ, ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಶಿಕ್ಷಣ, ಹಾಸ್ಟೆಲ್ ಸೌಲಭ್ಯ, ವಸತಿ ಸೌಲಭ್ಯ ದೊರಕಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು. ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಆರೋಗ್ಯ ತಪಾಸಣೆಗೆ ಸಂಬಂಧಿಸಿದಂತೆ ಮಾತನಾಡಿದ ಜಿಲ್ಲಾಧಿಕಾರಿಗಳು ಯಾವ ಪ್ರದೇಶಗಳಲ್ಲಿ ಇನ್ನೂ ಆರೋಗ್ಯ ತಪಾಸಣೆ ಆಗಿರುವುದಿಲ್ಲ ಅಂತಹ ಪ್ರದೇಶಗಳ ಸಮೀಕ್ಷೆ ನಡೆಸಿ ಆರೋಗ್ಯ ತಪಾಸಣೆ ಕೈಗೊಳ್ಳಬೇಕೆಂದು ಸೂಚಿಸಿದರು. ಒಟ್ಟಾರೆಯಾಗಿ ಸರ್ಕಾರದ ಸವಲತ್ತುಗಳನ್ನು ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಒದಗಿಸಿ ಅವರು ಸಮಾಜದ ಮುಖ್ಯ ವಾಹಿನಿಗೆ ಬರಲು ಕ್ರಮ ವಹಿಸಬೇಕು ಎಂದರು.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮಹಬೂಬ ತುಂಬರಮಟ್ಟಿ ಮಾತನಾಡಿ ಅಲೆಮಾರಿ, ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ 1 ರಿಂದ 10 ನೇ ತರಗತಿಯವರೆಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಮಾಹೆಯಾನ 200 ರೂ. ಶಿಷ್ಯವೇತನ ನೀಡಲಾಗುತ್ತಿದೆ. 2024-25 ನೇ ಸಾಲಿನಲ್ಲಿ ಜಿಲ್ಲೆಯ 340 ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ 8,80,000 ರೂ ವಿದ್ಯಾರ್ಥಿ ವೇತನ ಮಂಜೂರು ಮಾಡಿದೆ. ಮೆಟ್ರಿಕ್ ನಂತರದ 151 ವಿದ್ಯಾರ್ಥಿಗಳಿಗೆ 12,73,000 ರೂ. ವಿದ್ಯಾರ್ಥಿ ವೇತನ ಮಂಜೂರು ಮಾಡಿದೆ. ಅಲೆಮಾರಿ, ಅರೆ ಅಲೆಮಾರಿ ವಸತಿ ಯೋಜನೆಯಡಿ 2022-23 ನೇ ಸಾಲಿಗೆ ಗದಗ ಜಿಲ್ಲೆಗೆ 71 ಮನೆಗಳನ್ನು ನಿಗದಿಪಡಿಸಲಾಗಿದೆ. 2025-26 ನೇ ಸಾಲಿನಲ್ಲಿ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳ ಸಿಸಿ ರಸ್ತೆ, ಹೈಮಾಸ್ಕ್ ನಿರ್ಮಾಣ ಕುರಿತ ವಿವರಗಳ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿರ್ಮಲಾ,ಯೋಜನಾ ನಿರ್ದೇಶಕರಾದ ಚಳಗೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಎಸ್.ಎಸ್.ನೀಲಗುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ , ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 