ಮಕ್ಕಳನ್ನು ಚುನಾವಣಾ ಕಾರ್ಯ, ಪ್ರಚಾರ ಕಾರ್ಯಗಳಲ್ಲಿ ಬಳಸಿಕೊಳ್ಳದಂತೆ ಡಿಸಿ ಆದೇಶ
ಬಳ್ಳಾರಿ28 : 2023ರ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆ ಕಾರ್ಯ ಮತ್ತು ಪ್ರಚಾರ ಕಾರ್ಯಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಪವನ್ಕುಮಾರ್ ಮಾಲಪಾಟಿ ಅವರು ಆದೇಶಿಸಿದ್ದಾರೆ.
ಭಾರತ ಸರ್ಕಾರವು ವಿಶ್ವಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಸಂಬಂಧಿಸಿದಂತೆ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ ಮಕ್ಕಳು ಕಾರ್ಯನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕನ್ನುಂಟು ಮಾಡುವ ಯಾವುದೇ ಚಟುವಟಿಕೆಯಲ್ಲಿ ಭಾಗವಹಿಸದಂತೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಿದೆ.
ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಚುನಾವಣಾ ಕಾರ್ಯಗಳಲ್ಲಿ ಯಾವುದೇ ಪಕ್ಷಗಳು 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಅಗತ್ಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಕೋರಿದ್ದು, ಒಂದು ವೇಳೆ ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸುತ್ತೂರು ಜೆಎಸ್ಎಸ್ ಶಾಲೆ ಉಚಿತ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ,ಮಾ.28: ಸುತ್ತೂರು ಶ್ರೀಕ್ಷೇತ್ರದ ಜೆಎಸ್ಎಸ್ ಶಾಲೆಗೆ ಮತ್ತು ಉಚಿತ ವಿದ್ಯಾರ್ಥಿ ನಿಲಯದ 2023-24ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕನ್ನಡ ಮಾಧ್ಯಮಕ್ಕೆ 1 ರಿಂದ 8ನೇ ತರಗತಿವರೆಗೆ ಮತ್ತು ಇಂಗ್ಲೀಷ್ ಮಾಧ್ಯಮಕ್ಕೆ 1, 2, 5 ಹಾಗೂ 8ನೇ ತರಗತಿಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿದೆ. ಗ್ರಾಮಾಂತರ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಬಾಲಕ ಹಾಗೂ ಬಾಲಕಿಯರಿಗೆ ಪ್ರವೇಶ ನೀಡಲಾಗುವುದು.
ಅರ್ಜಿಯನ್ನು ಶಾಲಾ ಕಚೇರಿಯಲ್ಲಿ ಖುದ್ದಾಗಿ ಪಡೆಯಬಹುದು ಅಥವಾ ತಿತಿತಿ.ಱಿಛಿಠರಣಣಣಣಡಿ.ಠರ ಹಾಗೂ ತಿತಿತಿ.ಱಿಠಟಟಿಜ.ಠರ ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ದೂರವಾಣಿಯಲ್ಲಿ ಸಂಪರ್ಕಿಸಿದರೆ ವ್ಯಾಟ್ಸ್ಪ್ ಮೂಲಕವೂ ಅರ್ಜಿ ನಮೂನೆಯನ್ನು ಕಳುಹಿಸಿಕೊಡಲಾಗುವುದು. ಅಂಚೆ ಮುಖಾಂತರ ಅರ್ಜಿ ಪಡೆಯಲು ಇಚ್ಛಿಸುವವರು, ವಿದ್ಯಾರ್ಥಿಯು ಪ್ರವೇಶ ಬಯಸುವ ತರಗತಿಯ ವಿವರ ಹಾಗೂ ಸ್ವ-ವಿಳಾಸವುಳ್ಳ 5 ರೂ.ಗಳ ಪೋಸ್ಟಲ್ ಸ್ಟಾ-್ಯಂಪ್ ಹಚ್ಚಿದ ಲಕೋಟೆಯನ್ನು ಆಡಳಿತಾಧಿಕಾರಿಗಳು, ಜೆಎಸ್ಎಸ್ ಸಂಸ್ಥೆಗಳು, ಸುತ್ತೂರು-571129, ನಂಜನಗೂಡು ತಾಲ್ಲೂಕು, ಮೈಸೂರು ಜಿಲ್ಲೆ. ಈ ವಿಳಾಸಕ್ಕೆ ಕಳುಹಿಸಿ ಪಡೆಯಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಮೇ 13 ರೊಳಗಾಗಿ ಸಲ್ಲಿಸಬೇಕು.
ಅರ್ಜಿಯ ಜೊತೆಗೆ ಹಿಂದಿನ ತರಗತಿಯ ಅಂಕಪಟ್ಟಿ, ಭಾವಚಿತ್ರ, ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ಕಾರ್ಡ್, ರೇಷನ್ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಅಂಚೆ ಮುಖಾಂತರ ಆಡಳಿತಾಧಿಕಾರಿಗಳು, ಜೆಎಸ್ಎಸ್ ಸಂಸ್ಥೆಗಳು, ಸುತ್ತೂರು-571129, ನಂಜನಗೂಡು ತಾಲ್ಲೂಕು, ಮೈಸೂರು ಜಿಲ್ಲೆ ಈ ವಿಳಾಸಕ್ಕೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೊ.7411486938 (ವ್ಯಾಟ್ಸ್ಪ್ ನಂ), ಹಿರಿಯ ಪ್ರಾಥಮಿಕ ಶಾಲೆ ದೂ.08221-232054, ಪ್ರೌಢಶಾಲೆ ದೂ.08221-232653, ಬಸವೇಶ್ವರ ವಿದ್ಯಾರ್ಥಿನಿಲಯ ದೂ.08221-232332, ಸಂಯೋಜನಾಧಿಕಾರಿಗಳ ಕಚೇರಿ ದೂ.08221-232217 ಗೆ ಸಂಪರ್ಕಿಸಿ ವಿವರ ಪಡೆಯಬಹುದಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.