ಗದಗ ಸಿದ್ಧಲಿಂಗ ನಗರದ ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಭೇಟಿ
ಗದಗ 24: ಜಿಲ್ಲೆಯಲ್ಲಿ ಸೋಮವಾರದಿಂದ 9 ರಿಂದ 12 ನೇ ವರ್ಗದ ಭೌತಿಕ ಶಾಲಾ ತರಗತಿಗಳು ಆರಂಭವಾಗಿರುವುದರಿಂದ ಗದಗನ ಸಿದ್ಧಲಿಂಗ ನಗರದಲ್ಲಿನ ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಭೇಟಿ ನೀಡಿದರು. ಶಾಲೆಯಲ್ಲಿ ಕೋವಿಡ್ ಮಾರ್ಗಸೂಚಿಗಳ ಪಾಲನೆಯಾಗುತ್ತಿರುವ ಕುರಿತು ಹಾಗೂ ಸ್ವಚ್ಛತೆಯ ಪರೀಶೀಲನೆ ನಡೆಸಿದರು. ಮಕ್ಕಳು ಯಾವುದೇ ಭಯವಿಲ್ಲದೇ ಧೈರ್ಯದಿಂದ ಶಾಲೆಗೆ ಆಗಮಿಸಿ ಕಲಿಕೆಯಲ್ಲಿ ಮುಂದುವರೆಯಬೇಕು. ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೇ ಅನುಸರಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸಲಿಂಗಪ್ಪ, ಶಾಲಾ ಶಿಕ್ಷಕರು , ವಿದ್ಯಾರ್ಥಿಗಳು ಹಾಜರಿದ್ದರು.