ರೈತರ ಆರ್ಥಿಕ ಸಬಲೀಕರಣಕ್ಕೆ ಡಿಸಿಸಿ ಬ್ಯಾಂಕ್ನಿಂದ ಹಲವು ಯೋಜನೆ
ಪಾಲಬಾವಿ 07: ರೈತರು ಆರ್ಥಿಕವಾಗಿ ಸಬಲರಾಗಬೇಕು ಎಂಬ ಉದ್ದೇಶದಿಂದ ಡಿಸಿಸಿ ಬ್ಯಾಂಕ್ ವತಿಯಿಂದ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಅಪ್ಪಾಸಾಬ್ ಕುಲಿಗೋಡ ಹೇಳಿದರು.
ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಟ್ರ್ಯಕ್ಟರ್, ಪೈಪ್ಲೈನ್, ಹೈನುಗಾರಿಕೆ ಹಾಗೂ ಬಂಗಾರ ಸಾಲ ಸೇರಿದಂತೆ ವಿವಿಧ ಸಾಲ ಸೌಲಭ್ಯಗಳನ್ನು ಬ್ಯಾಂಕ್ನಿಂದ ಒದಗಿಸಲಾಗುತ್ತಿದೆ. ಮಹಿಳೆಯರ ಸಬಲೀಕರಣಕ್ಕಾಗಿ ಸ್ವಸಹಾಯ ಸಂಘಗಳಿಗೂ ಸಾಲ ನೀಡಲಾಗುತ್ತಿದ್ದು, ವಿವಿಧ ಯೋಜನೆಗಳ ಪ್ರಯೋಜನವನ್ನು ರೈತರು ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಸಮೀಪದ ಕಪ್ಪಲಗುಡ್ಡಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಶ್ರಯದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಡಿಸಿಸಿ ಬ್ಯಾಂಕ್ನ ವಿಶೇಷ ಯೋಜನೆಯಾದ ‘ಮಾಧ್ಯಮಿಕ ಯೋಜನೆ’ ಅಡಿಯಲ್ಲಿ ರೂ.18 ಲಕ್ಷ ವೆಚ್ಚದಲ್ಲಿ ಖರೀದಿಸಲಾದ ಎರಡು ಟ್ರ್ಯಕ್ಟರ್ಗಳನ್ನು ಫಲಾನುಭವಿಗಳಾದ ಸದಾಶಿವ ಅಂಗಡಿ ಹಾಗೂ ಕುಮಾರ ಕಲ್ಯಾರ ಅವರಿಗೆ ವಿತರಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶಿವಪ್ಪ ದಡ್ಡಿಮನಿ ವಹಿಸಿದ್ದರು.