ಸೋನಿಯಾ ಗಾಂಧಿ ಸ್ಪರ್ಧೆ ಮಾಡಿದರು ಸೋಲು ಖಚಿತ: ಡಿಸಿಎಂ ಲಕ್ಷ್ಮಣ್ ಸವದಿ
ಬಸವಕಲ್ಯಾಣ: ಬಿಜೆಪಿ ಕಾರ್ಯಕರ್ತರ ಅಸಮಾಧಾನ ಸಾಮಾನ್ಯ
ಅಥಣಿ 27: ಬಸವಕಲ್ಯಾಣ ಉಪ ಚುನಾವಣೆ ನಿಮಿತ್ಯ ಕೆಲವು ಅಕಾಂಕ್ಷಿಗಳು ಹಾಗೂ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಅದನ್ನು ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು ಹಾಗೂ ಇದು ಪಕ್ಷದಲ್ಲಿ ಸಹಜವಾಗಿಯೇ ನಡೆಯುವ ಪ್ರಕ್ರಿಯೆ ಎಲ್ಲವೂ ಸರಿಯಾಗುತ್ತದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಅಥಣಿ ಪಟ್ಟಣದಲ್ಲಿ ಪತ್ರಕರ್ತರ ಜೊತೆ ಮಾತನಾಡುತ್ತಾ ಬಸವಕಲ್ಯಾಣ ಬಿಜೆಪಿ ಅಭ್ಯರ್ಥಿಯಾದ ಶರಣು ಸಲಗರ ಅವರಿಗೆ ಟಿಕೆಟ್ ನೀಡಿದ್ದಕ್ಕೆ ಕೆಲವರು ಸಹಜವಾಗಿ ರಾಜಕಾರಣದಲ್ಲಿ ಸ್ವಲ್ಪ ಮಟ್ಟಿಗೆ ಅಸಮಾಧಾನ ಮೂಡುವದು ಸಹಜ. ಶರಣು ಸಲಗರ ಅಧಿಕ ಮತಗಳಿಂದ ವಿಜಯ್ ಸಾಧಿಸುತ್ತಾರೆ. ನಿಜವಾದ ಬಿಜೆಪಿ ಕಾರ್ಯಕರ್ತರು ಯಾರೂ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಲ್ಲ ಹಾಗೂ ಬಂಡಾಯವಾಗಿ ಉಪ ಚುನಾವಣೆ ಸ್ವರ್ಧೆ ಮಾಡುವುದಿಲ್ಲ ಎಂದು ಹೇಳಿದರು.
ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ಖಾಲಿ ಇರುವುದು ಮತ್ತು ಇನ್ನೂ ಕೆಲವು ಸಚಿವ ಸ್ಥಾನಗಳು ಕಾಲಿ ಇರುವುದುಂಟು ಯಾವಾಗ್ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಆವಾಗ ವರಿಷ್ಠರು ಯಾರಿಗೆ ನೀಡಬೇಕೆಂದು ತಿಳಿಸುತ್ತಾರೆಂದು ಪ್ರತಿಕ್ರಿಯಿಸಿದರು. ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಇಲ್ಲದೆ ಇರುವುದರಿಂದ ಚುನಾವಣೆಯಲ್ಲಿ ಯಾವುದೇ ಪರಿಣಾಮ ಬಿರುವುದಿಲ್ಲ ಮತ್ತು ಬೆಳಗಾವಿ ರಾಯಚೂರು ಎರಡು ಕಡೆ ಚುನಾವಣೆ ಪ್ರಚಾರಕ್ಕೆ ಹೋಗುತ್ತೆನೆಂದು ಸವದಿ ಹೇಳಿದರು.
ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಪ್ರಬಲವಾದ ಕಾಂಗ್ರೆಸ್ ಅಭ್ಯರ್ಥಿ ಎಂಬುದು ಇಲ್ಲಿ ಪ್ರಶ್ನೆಯಲ್ಲ. ಬಿಜೆಪಿ ಪಕ್ಷದ ಎದುರು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸ್ವರ್ಧೆ ಮಾಡಿದರೂ ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ ದೇಶದ ಪ್ರಧಾನಿ ನರೇಂದ್ರ ಮೋದಿ ಶಕ್ತಿ ಹೆಚ್ಚಿಸಲು ಮತದಾರರ ಪ್ರಭು ಆಶೀರ್ವಾದ ಮಾಡುತ್ತಿದ್ದಾರೆ.
ಮೂರು ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು.