ಹೊಸಪೆಟೆ- ವಿಜಯನಗರ ನಡುವೆ ಡೆಮೊ ರೈಲು ಸಂಚಾರಕ್ಕೆ ಚಾಲನೆ
DEMU train service between Hosapete and Vijayanagara flagged off
ಲೋಕದರ್ಶನ ವರದಿ
ವಿಜಯನಗರ, 25: ಕಳೆದ ಹಲವು ವರ್ಷಗಳಿಂದ ವಿಜಯನಗರ ರೈಲ್ವೆ ಬಳಕೆದಾರರ ಸಂಘ ಹಾಗೂ ನಂದಿಪುರ ಮಠದ ಶ್ರೀ ಮಹೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ಹಗರಿಬೊಮ್ಮನಹಳ್ಳಿ, ಕೊಟ್ಟೂರು ರೈಲ್ವೆ ಸಮಿತಿಗಳು ನಡೆಸಿದ ಹೋರಾಟಕ್ಕೆ ಸ್ಪಂದಿಸಿರುವ ನೈರುತ್ಯ ರೈಲ್ವೆ ವಲಯವು ಆ.28ರಿಂದ ಹೊಸಪೆಟೆ ಹಿಅರಿಸಿಕೆರೆ ನಡುವೆ ನೂತನ ಡೆಮೊ ರೈಲು ಸಂಚಾರಕ್ಕೆ ಚಾಲನೆ ನೀಡಲಿದೆ.
ವಾರದಲ್ಲಿ ಐದು ದಿನ ರೈಲು ಸಂಚರಿಸಲಿದ್ದು, ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ಬೆಳಗ್ಗೆ 6.30ಕ್ಕೆ ಹೊಸಪೇಟೆ ನಿಲ್ದಾಣದಿಂದ ರೈಲು ಹೊರಡಲಿದೆ. ಕೊಟ್ಟೂರು, ದಾವಣಗೆರೆ ಹಾಗೂ ಕಡೂರು ಮಾರ್ಗವಾಗಿ ಸಂಚರಿಸಿ ಮಧ್ಯಾಹ್ನ 2.20ಕ್ಕೆ ಅರಸೀಕೆರೆ ತಲುಪಲಿದೆ.
ಅರಸೀಕೆರೆಯಿಂದ ಮಧ್ಯಾಹ್ನ 2.30ಕ್ಕೆ ಹೊರಡುವ ರೈಲು ಇದೇ ಮಾರ್ಗದಲ್ಲಿ ಸಂಚರಿಸಿ ರಾತ್ರಿ 9.30ಕ್ಕೆ ಹೊಸಪೇಟೆ ತಲುಪಲಿದೆ. ಈ ರೈಲು ಸೇವೆಯಿಂದ ವಿಜಯನಗರ ಜಿಲ್ಲೆಯ ಪಶ್ಚಿಮ ತಾಲ್ಲೂಕುಗಳಿಂದ ದಾವಣಗೆರೆ ಕಡೆಗೆ ಸಂಚರಿಸುವ ಶಾಲಾ-ಕಾಲೇಜು ವಿದ್ಯಾರ್ಥಿಗಳು, ವ್ಯಾಪಾರಸ್ಥರು ಹಾಗೂ ವಿವಿಧ ಕೆಲಸಗಳಿಗಾಗಿ ತೆರಳುವ ಸಾರ್ವಜನಿಕರಿಗೆ ಅನುಕೂಲವಾಗಲಿದೆ.
ಅದೇ ರೀತಿ ಅರಸೀಕೆರೆಯಿಂದ ಮೈಸೂರು ಹಾಗೂ ವಿವಿಧ ಪ್ರವಾಸಿ, ಧಾರ್ಮಿಕ ಮತ್ತು ಶೈಕ್ಷಣಿಕ ಕೇಂದ್ರಗಳಾದ ಹಾಸನ, ಬೇಲೂರ-ಹಳೇಬೀಡು ಶ್ರವಣಬೆಳಗೊಳ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಉಡುಪಿ ಹಾಗೂ ಮಂಗಳೂರಿಗೆ ತೆರಳುವ ಪ್ರಯಾಣಿಕರಿಗೂ ಈ ರೈಲು ಸೇವೆ ಅನುಕೂಲವಾಗಲಿದೆ.
ಪ್ರಯಾಣಿಕರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ರೈಲು ಸೇವೆ ಆರಂಭಿಸಲು ಕ್ರಮ ಕೈಗೊಂಡ ನೈರುತ್ಯ ರೈಲ್ವೆ ವಲಯದ ಅಧಿಕಾರಿಗಳು, ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ವಿಜಯನಗರ ರೈಲ್ವೆ ಬಳಕೆದಾರರ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 