ದಲಿತರಿಗೆ ಮುಖ್ಯಮಂತ್ರಿ ಪಟ್ಟ ದೊರೆಯಲಿದೆ: ರಾಜು ಗೌಡ
ಯಾದಗಿರಿ, ಜ 12 : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅವಧಿ ಮುಗಿದ ನಂತರ ರಾಜ್ಯದಲ್ಲಿ ದಲಿತರಿಗೆ ಮುಖ್ಯಮಂತ್ರಿ ಪಟ್ಟ ದೊರೆಯಲಿದೆ ಎಂದು ಬಿಜೆಪಿ ಶಾಸಕ ರಾಜುಗೌಡ ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತರು ಮುಖ್ಯಮಂತ್ರಿ ಆಗಬೇಕಾದರೆ ಅದು ಬಿಜೆಪಿಯಿಂದಲೇ ಸಾಧ್ಯ. ಬೇರೆ ಪಕ್ಷದಲ್ಲಿ ಆಗಲು ಸಾಧ್ಯವಿಲ್ಲ. ನಾವೆಲ್ಲರೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರಿನಲ್ಲಿ ಶಾಸಕರಾಗಿದ್ದೇವೆ ಎಂದರು.
ಯಡಿಯೂರಪ್ಪನವರ ಅವಧಿ ಮುಗಿದ ಬಳಿಕ ಬಿಜೆಪಿ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ದಲಿತರಿಗೆ ಸಿಎಂ ಸ್ಥಾನ ಸಿಗುತ್ತದೆ. ಬಿಜೆಪಿಯಿಂದಲೇ ದಲಿತರಿಗೆ ಒಳ್ಳೆಯ ಸ್ಥಾನಮಾನ ಸಿಗಲು ಸಾಧ್ಯ ಎಂದರು.
ಕಾಂಗ್ರೆಸ್, ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ದಲಿತರ ಅಭಿವೃದ್ಧಿಯ ಬಗ್ಗೆ ಕಾಳಜಿ ವಹಿಸಲಿಲ್ಲ. ಅಲ್ಲದೇ, ಪಕ್ಷ ಸಂಪೂರ್ಣ ಬಹುಮತದಿಂದ ಅಧಿಕಾರದ ಚುಕ್ಕಾಣಿ ಹಿಡಿದಿದ್ದರೂ, ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಿಲಿಲ್ಲ ಎಂದು ಅವರು ಆರೋಪಿಸಿದರು.
ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ. ಆದರೆ, ಅವರಿಗೂ ಮುಖ್ಯಮಂತ್ರಿ ಸ್ಥಾನ ನೀಡಿಲಿಲ್ಲ ಎಂದರು.
ಮೈತ್ರಿ ಸರ್ಕಾರದಲ್ಲಿ ಜಿ.ಪರಮೇಶ್ವರಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿತ್ತು. ಆದರೆ, 2013 ರಲ್ಲಿಯೇ ಪರಮೇಶ್ವರ್ ಅವರಿಗೆ ಕಾಂಗ್ರೆಸ್ ಮುಖ್ಯಮಂತ್ರಿ ಮಾಡಲಿಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ರಾಜು ಗೌಡ ಟಾಂಗ್ ನೀಡಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 