ಹಿಪ್ಪರಗಿ ಬ್ಯಾರೇಜ್‌ಗೆ ಹಾನಿ..! ಸುಮಾರು 1-2 ಟಿಎಂಸಿ ನೀರು ಪೋಲು..!! 7 ಅಡಿ ಇಳಿಕೆಯಾದ ಕೃಷ್ಣಾ ನದಿ
Damage to Hipparagi Barrage..! About 1-2 TMC of water lost..!! Krishna River down by 7 feet
ಕಾಗವಾಡ 07: ಹಿಪ್ಪರಗಿ ಬ್ಯಾರೇಜ್‌ನ 22ನೇ ಗೇಟ್ ಬಾಗಿಲು ನಿನ್ನೆ ದಿ. 06 ರಂದು ಮುರಿದು, ಹೋಗಿದ್ದು, ಕೇವಲ 24 ಗಂಟೆಯಲ್ಲಿ ತಾಲೂಕಿನಲ್ಲಿ ಕೃಷ್ಣಾ ನದಿಯ ನೀರಿನ ಮಟ್ಟ ಸುಮಾರು 7 ರಿಂದ 8 ಅಡಿಗಳಷ್ಟು ಇಳಿಕೆಗೊಂಡಿದೆ. ತ್ವರಿತವಾಗಿ ಗೇಟ್ ರಿಪೇರಿಯಾಗದೇ ಹೋದಲ್ಲಿ ಇನ್ನೆಡರು ದಿನಗಳಲ್ಲಿ ಕೃಷ್ಣಾ ನದಿ ಸಂಪೂರ್ಣ ಬತ್ತಿಹೋಗುವ ಆತಂಕ ನಿರ್ಮಾಣಗೊಂಡಿದೆ. ತಾಲೂಕಿನ ಕೃಷ್ಣಾ ನದಿ ದಡದ ಮಂಗಾವತಿ, ಜುಗೂಳ, ಶಹಾಪೂರ, ಕುಸನಾಳ, ಮೊಳವಾಡ, ಉಗಾರ ಬಿಕೆ, ಉಗಾರ ಖುರ್ದ, ಕೃಷ್ಣಾ ಕಿತ್ತೂರು ಸೇರಿದಂತೆ ಶಿರಗುಪ್ಪಿ, ಐನಾಪೂರ ಗ್ರಾಮಗಳಿಗೆ ಬೇಸಿಗೆ ಕಾಲದಲ್ಲಿ ಜನ-ಜಾನುವಾರುಗಳಿಗೆ ಕುಡಿಯಲು ಮತ್ತು ಸಾವಿರಾರು ಎಕರೆ ಬೆಳೆಗಳಿಗೆ ತೊಂದರೆ ಉಂಟಾಗಲಿದೆ.
ನಿನ್ನೆ ಮಧ್ಯಾಹ್ನದಿಂದ ಇಂದು ಮಧ್ಯಾಹ್ನದ ವರೆಗೆ 24 ಗಂಟೆಯಲ್ಲಿ ಕೃಷ್ಣಾ ನದಿಯ ನೀರಿನ ಮಟ್ಟ 7-8 ಅಡಿಗಳಷ್ಟು ಇಳಿಕೆಯಾಗಿದ್ದು, ನದಿ ತೀರದ ರೈತರನ್ನು ಮತ್ತು ಗ್ರಾಮಸ್ಥರು ಆತಂಕಕ್ಕೆ ದೂಡಿದೆ. ಕೂಡಲೇ ಬ್ಯಾರೇಜ್ ಗೇಟ್ ರಿಪೇರಿಯಾಗದೇ ಹೋದಲ್ಲಿ ಜುಗೂಳ ಗ್ರಾಮದ ಕೃಷ್ಣಾ ನದಿ ಸಂಪೂರ್ಣ ಬತ್ತಿ ಹೋಗುವ ಭೀತಿ ನಿರ್ಮಾಣವಾಗಲಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಬ್ಯಾರೇಜ್‌ನ ರಿಪೇರಿ ಕಾರ್ಯ ಕೈಗೊಂಡು, ತಾಲೂಕಿನ ರೈತರನ್ನು ಮತ್ತು ಗ್ರಾಮಸ್ಥರನ್ನು ಕಾಪಾಡಬೇಕಾಗಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 