ಮಳೆಯಿಂದ‌ ಮನೆಗಳ‌ ಹಾನಿ : ಕುಟುಂಸ್ಥರಿಗೆ ಪರಿಹಾರ ವಿತರಿಸಿದ ಸಚಿವ ಜಾರಕಿಹೊಳಿ

ಮಳೆಯಿಂದ‌ ಮನೆಗಳ‌ ಹಾನಿ : ಕುಟುಂಸ್ಥರಿಗೆ ಪರಿಹಾರ ವಿತರಿಸಿದ ಸಚಿವ ಜಾರಕಿಹೊಳಿ

ಬೆಳಗಾವಿ : ಅತಿ ಹೆಚ್ಚು ಮಳೆ ಬಿದ್ದ ಹಿನ್ನೆಲೆಯಲ್ಲಿ ಮನೆಗಳು ಹಾನಿಯಾಗಿರುವ ಖಾನಾಪುರ ತಾಲೂಕಿನ ಭೂರಣಕಿ ಗ್ರಾಮಕ್ಕೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಮಂಗಳವಾರ ಭೆಟ್ಟಿ ನೀಡಿ ಮನೆ ಹಾನಿ ಬಗ್ಗೆ ‌ಅವಲೋಕಿಸಿದರು. ಅಲ್ಲದೆ ಮನೆ ಹಾನಿಯಾದ ಎರಡು ಕುಟುಂಬದವರಿಗೆ ತಲಾ 1.20 ಲಕ್ಷ ಪರಿಹಾರ ವಿತರಣೆ ಮಾಡಿದರು.

  ಮಂಗಳವಾರ ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಖಾನಾಪುರ ತಾಲ್ಲೂಕಿನ ಭೂರಣಕಿ ಗ್ರಾಮಕ್ಜೆ ಭೇಟಿ ನೀಡಿ ಮನೆ ಹಾನಿಯನ್ನು ಪರಿಶೀಲಿಸಿದ ಬಳಿಕ ಮಾಧ್ಯಮದವರ ಜತೆ ಅವರು ಮಾತನಾಡಿದರು. ಭೂರಣಕಿ ಗ್ರಾಮದ ಖೈರುಣ್ಣಿಸಾ ಅಬ್ದುಲಗನಿ ಹೀರೆಕರ್ ಎಂಬುರಿಗೆ ಸೇರಿದ ಮನೆ ಮಳೆಗೆ ಹಾನಿಯಾಗಿದ್ದು, ಈ ಮನೆಯಲ್ಲಿ ನಾಲ್ಕು ಜನ ಪುಟ್ಟ‌ ಮಕ್ಕಳು ಸೇರಿ ಒಟ್ಟು 8 ಜನ ವಾಸಿಸುತ್ತಿದ್ದರು. ಮಳೆಯ ಹಿನ್ನೆಲೆಯಲ್ಲಿ ಮನೆಯ ಒಂದು ಭಾಗವು ಸಂಪೂರ್ಣ ‌ಹಾನಿಯಾಗಿದೆ. ಅದರಂತೆ ಅದೇ ಗ್ರಾಮದಲ್ಲಿನ ಗೋಪಾಲ್ ತಾರೋಡಕರ್  ಎರಡು‌ ಕುಟುಂಸ್ಥರಿಗೆ ಪರಿಹಾರ ಚೆಕ್ ಹಾಗೂ ಪಡಿತರ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ಖಾನಾಪುರ ಶಾಸಕ ವಿಠ್ಠಲ ಹಲಗೇಕರ್, ಮಾಜಿ ಶಾಸಕಿ ಅಂಜಲಿ ನಿಂಬಾಳಕರ್,‌ ಜಿಲ್ಲಾಧಿಕಾರಿ ನಿತೇಶ ಪಾಟೀಲ, ತಹಶಿಲ್ದಾರ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

   ಈ‌ ಸಂದರ್ಭದಲ್ಲಿ ಜಿಲ್ಲಾಧಿಕಾರಿ ‌ನಿತೀಶ ಪಾಟೀಲ ಅವರು ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮಳೆಯ ಹಾಗೂ ಹಾನಿಯ ಬಗ್ಗೆ ಮಾಹಿತಿ ನೀಡಿ, ಖಾನಾಪುರ ತಾಲೂಕಿನಲ್ಲಿ ವಾಡಿಕೆಗಿಂತಲೂ ಹೆಚ್ವಿನ ಪ್ರಮಾಣದಲ್ಲಿ ಮಳೆಯಾಗಿರುವ ಕುರಿತು ವಿವರಿಸಿದರು. ಬಳಿಕ ಭೂರಣಕಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು, ಗ್ರಾಮಸ್ಥರ ಅಹವಾಲು ಕೇಳಿದರು.

ನದಿ ದಾಟಲು ಕಿರುಸೇತುವೆ ನಿರ್ಮಾಣಕ್ಕೆ ಚಿಂತನೆ : ಜಾರಕಿಹೊಳಿ 

ಬೆಳಗಾವಿ : ಮಳೆಗಾಲದಲ್ಲಿ ಖಾನಾಪುರ ಸೇರಿದಂತೆ ರಾಜ್ಯದ ಮಲೆನಾಡು ಪ್ರದೇಶಗಳಲ್ಲಿ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ನದಿ ದಾಟಲು ಅನುಕೂಲವಾಗುವಂತೆ ಕಿರುಸೇತುವೆಗಳನ್ನು ನಿರ್ಮಿಸುವ ಬಗ್ಗೆ ವಿಶೇಷ ಯೋಜನೆಯನ್ನು ಜಾರಿಗೆ ತರುವ ಚಿಂತನೆ ನಡೆಸಲಾಗುತ್ತಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ನದಿ ದಾಟಲು ಅನುಕೂಲವಾಗುವಂತೆ ಐದರಿಂದ ಹತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಕಿರುಸೇತುವೆ ನಿರ್ಮಾಣಕ್ಕೆ ಚಿಂತನೆ ನಡೆದಿದೆ. ಅದೇ ರೀತಿ ಖಾನಾಪುರ ತಾಲ್ಲೂಕಿನಲ್ಲಿ ಸೇತುವೆ ನಿರ್ಮಾಣಕ್ಕೆ ವಿಶೇಷ ಅಭಿಯಾನ ಮಾದರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು 

ಮನೆಹಾನಿ-ಹೆಚ್ಚಿನ ಪರಿಹಾರಕ್ಕೆ ಚಿಂತನೆ :

   ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಗೊಳಗಾಗಿರುವ ಮನೆಗಳಿಗೆ ಸದ್ಯಕ್ಜೆ ಮಾರ್ಗಸೂಚಿ ಪ್ರಕಾರ ಪರಿಹಾರವನ್ನು ನೀಡಲಾಗುತ್ತಿದೆ. ಸಂಪೂರ್ಣವಾಗಿ ಕುಸಿದಿರುವ ಮನೆಗಳ ನಿರ್ಮಾಣಕ್ಕೆ ಐದು ಲಕ್ಷ ರೂಪಾಯಿ ಪರಿಹಾರವನ್ನು ನೀಡುವ ಬಗ್ಗೆ ಸರಕಾರದ ಮಟ್ಟದಲ್ಲಿ ನಿರ್ಧರಿಸಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

  ಮಳೆಯಿಂದಾಗಿ ಅನೇಕ ಕಡೆಗಳಲ್ಲಿ ರಸ್ತೆಗಳು ತೀವ್ರ ಹದಗೆಟ್ಟಿರುವುದು ಗಮನಕ್ಕೆ ಬಂದಿರುತ್ತದೆ. ಸದ್ಯಕ್ಜೆ ತಾತ್ಕಾಲಿಕ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು. ನವೆಂಬರ್ ಬಳಿಕ ರಸ್ತೆ ನಿರ್ಮಾಣದ ಕುರಿತು ಪರಿಶೀಲಿಸಲಾಗುವುದು ಎಂದರು.

 87 ಮನೆ ಭಾಗಶಃ ಕುಸಿತ:

   ಜಿಲ್ಲೆಯಲ್ಲಿ 87 ಮನೆಗಳು ಭಾಗಶಃ ಕುಸಿದಿವೆ. ನಾಲ್ಕು ಸಂಪೂರ್ಣವಾಗಿ ಕುಸಿದಿದ್ದು, ನಾಲ್ಕು ಮನೆಗಳು ಸಂಪೂರ್ಣವಾಗಿ ಕುಸಿದಿವೆ ಎಂದು ಮಾಹಿತಿ ನೀಡಿದ ಸಚಿವರು, ಮಳೆಯ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಅದೇ ರೀತಿ ಹಾನಿಯ ಪ್ರಮಾಣ ಕೂಡ ಹೆಚ್ಚಾಗಬಹುದು ಎಂದು ತಿಳಿಸಿದರು.

    ಸಂಭವನೀಯ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿರುತ್ತದೆ. ವೇದಗಂಗಾ-ದೂಧಗಂಗಾ ಸೇರಿದಂತೆ ಎಲ್ಲ ನದಿಗಳ ಒಳಹರಿವು ಪ್ರಮಾಣದ ಮೇಲೆ ನಿಗಾವಹಿಸಲಾಗಿದೆ ಎಂದರು. ಆಲಮಟ್ಟಿ ಜಲಾಶಯ ಭರ್ತಿಯಾದ ಬಳಿಕ ಒಳ ಹರಿವು ಆಧರಿಸಿ ಅದೇ ಪ್ರಮಾಣದಲ್ಲಿ ನೀರು ಹೊರ ಬಿಡಲಾಗುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

   ಈ ಸಂದರ್ಭದಲ್ಲಿ ಖಾನಾಪುರ ಶಾಸಕರಾದ ವಿಠ್ಠಲ ಹಲಗೇಕರ, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಹೆಚ್ವುವರಿ ಎಸ್ ಪಿ ವೇಣುಗೋಪಾಲ, ಉಪ ವಿಭಾಗಾಧಿಕಾರಿ ರಾಜೇಶ್ ನಾಯಕ, ತಹಶಿಲ್ದಾರ ಪ್ರಕಾಶ್ ಗಾಯಕವಾಡ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿ ಓದಿ