ರಸ್ತೆ ಅಪಘಾತದಲ್ಲಿ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಗಂಭೀರ ಗಾಯ
Dandeli Block Congress President seriously injured in road accident
ಕಾರವಾರ 04: ದಾಂಡೇಲಿ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ನಗರಸಭೆಯ ಹಾಲಿ ಸದಸ್ಯ ಮೋಹನ ಹಲವಾಯಿ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ತೀವ್ರ ಗಾಯಗೊಂಡ ಅವರನ್ನು ಧಾರವಾಡದ ಎಸ್.ಡಿ.ಎಂ.ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಂಡೇಲಿ ನಗರಸಭೆಯ ಸದಸ್ಯ ಮೋಹನ ಹಲವಾಯಿ ಬೆಳಿಗ್ಗೆ 9-30 ರ ಸುಮಾರಿಗೆ ದಾಂಡೇಲಿಯ ಮುಖ್ಯ ಅಂಚೆ ಕಛೇರಿ ಹತ್ತಿರದ ಬರ್ಚಿ ರಸ್ತೆಯಲ್ಲಿ ಸ್ಕೂಟಿ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬಂದ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಟ್ರಾಕ್ಟರ್ ಟೈರ್ ಕೆಳಗೆ ಸ್ಕೂಟಿ ಸಮೇತ ಸಿಲುಕಿದ್ದಾರೆನ್ನಲಾಗಿದೆ. ಅವರ ತಲೆ ಮತ್ತು ಮುಖಕ್ಕೆ ತೀವ್ರ ಸ್ವರೂಪದ ಗಾಯಗಳಾಗಿವೆ, ಕೂಡಲೇ ಸ್ಥಳೀಯರು ಅವರನ್ನು ದಾಂಡೇಲಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದರು. ಗಂಭೀರ ಸ್ವರೂಪದ ಪೆಟ್ಟು ಬಿದ್ದಿರುವ ಹಿನ್ನಲೆಯಲ್ಲಿ ಅವರನ್ನು ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೆ ಕಾರಣವನ್ನು ಸ್ಥಳೀಯ ಪೋಲಿಸರು ಹುಡುಕುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, ಸ್ಥಳ ಪರೀಶೀಲನೆ ನಡೆಸಿ, ತನಿಖೆ ನಡೆಸುತ್ತಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 