ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ

ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ

ಬೆಳಗಾವಿ : ಸ್ಥಳೀಯ ಗುರುವಾರ ಪೇಟೆ ಪ್ರದೇಶದಲ್ಲಿನ ತಿಲಕವಾಡಿ ಪೊಲೀಸ್ ಠಾಣೆಗೆ ಹೋಗುವ ರಸ್ತೆಯ ತಿರುವಿನಲ್ಲಿರುವ ಸಿಮೆಂಟ್ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ ಅಳವಡಿಸಲಾದ ಭೂಗತ ವಿದ್ಯುತ್ ತಂತಿಗಳಿಂದ ಬೆಂಕಿಯ ಕಿಡಿಗಳು ಹಾಗೂ ಹೊಗೆ ಹೊರ ಬರುತ್ತಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

   ನಿರಂತರ ಮಳೆಯಿಂದ ರಸ್ತೆ ಸಂಪೂರ್ಣ ಒದ್ದೆಯಾಗಿರುವ ಹಿನ್ನೆಲೆಯಲ್ಲಿ, ಈ ವಿದ್ಯುತ್ ದೋಷವು ಪಾದಚಾರಿಗಳು, ದ್ವಿಚಕ್ರ ವಾಹನ ಸವಾರರು ಹಾಗೂ ಇತರ ವಾಹನ ಚಾಲಕರಿಗೆ ವಿದ್ಯುತ್ ಆಘಾತ ಅಥವಾ ಪ್ರಾಣಾಪಾಯದ ಗಂಭೀರ ಅಪಾಯವನ್ನು ಉಂಟುಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

   ಈ ಹಿನ್ನೆಲೆಯಲ್ಲಿ, ಯಾವುದೇ ಅಹಿತಕರ ಘಟನೆ ಸಂಭವಿಸುವ ಮುನ್ನವೇ ಹೆಸ್ಕಾಂ (HESCOM) ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ತಕ್ಷಣ ಭೇಟಿ ನೀಡಿ, ಭೂಗತ ವಿದ್ಯುತ್ ದೋಷವನ್ನು ಪರಿಶೀಲಿಸಿ ಅಗತ್ಯ ದುರಸ್ತಿ ಕಾರ್ಯವನ್ನು ತುರ್ತಾಗಿ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

   ಈ ಬಗ್ಗೆ ಸಾರ್ವಜನಿಕ ಸುರಕ್ಷತೆಗೆ ಅತ್ಯುನ್ನತ ಆದ್ಯತೆ ನೀಡುವುದು ಅತ್ಯಗತ್ಯ ಎಂದು ಬೆಳಗಾವಿ ಫೇಸ್‌ಬುಕ್ ಫ್ರೆಂಡ್ಸ್ ಸರ್ಕಲ್ ಟೀಮ್ ನ ಮುಖ್ಯಸ್ಥ ಸಂತೋಷ್ ಆರ್. ದಾರೇಕರ್ ಅವರು ಹೇಳಿದ್ದಾರೆ. ಅಲ್ಲದೆ ಸಂಬಂಧ ಪಟ್ಟವರು ಇದರ ಕಡೆಗೆ ಗಮನ ಹರಿಸುವಂತೆ ಒತ್ತಾಯಿಸಿದ್ದಾರೆ. 


ಸುದ್ದಿ ಓದಿ