ದವಸ ಧಾನ್ಯ ತರಲು ಅಭಿಮಾನಿಗಳಿಗೆ ದರ್ಶನ್ ಸೂಚನೆ
ಬೆಂಗಳೂರು, ಜ 17, ಸ್ಟಾರ್ ನಟರ ಜನ್ಮದಿನವನ್ನು ಅಭಿಮಾನಿಗಳು ತಮ್ಮಷ್ಟದಂತೆ ಅದ್ಧೂರಿಯಾಗಿ ಆಚರಣೆ ಮಾಡುತ್ತಾರೆ. ಆದರೆ, ಚಾಲೇಂಜಿಂಗ್ ಸ್ಟಾರ್ ದರ್ಶನ್, ತಮ್ಮ ಜನ್ಮದಿನವನ್ನು ಸರಳವಾಗಿ ಆಚರಿಸಿಕೊಳ್ಳುತ್ತಿದ್ದು, ಈ ಬಾರಿಯೂ ಅದೇ ಸರಳತೆ ದರ್ಶನ್ ಮುಂದುವರೆಸಿದ್ದಾರೆ. ಫೆಬ್ರವರಿ16ರಂದು ದರ್ಶನ್ ಹುಟ್ಟು ಹಬ್ಬ ಇರುವುದರಿಂದ ಹಾರ, ತುರಾಯಿ, ಕೇಕ್ ತರುವ ಬದಲು ಅಕ್ಕಿ ,ಬೇಳೆ, ದವಸ ಧಾನ್ಯ ತರಲು ಡಿ ಬಾಸ್ ಅಭಿಮಾನಿಗಳಿಗೆ ಸೂಚಿಸಿದ್ದಾರೆ. ಜನ್ಮದಿನದ ನಂತರ ಸಂಗ್ರಹಣೆಯಾದ ಅಕ್ಕಿ, ಧವಸ ಧಾನ್ಯಗಳನ್ನು ಡಿ ಬಾಸ್ ಅನಾಥಾಶ್ರಮಗಳಿಗೆ ತಲುಪಿಸುವ ಯೋಜನೆ ರೂಪಿಸಿದ್ದು, ಈಗಾಗಲೇ ಮೈಸೂರಿನಲ್ಲಿ ದವಸ ಧಾನ್ಯ ಸಂಗ್ರಹಿಸುವ ಕೆಲಸಕ್ಕೆ ದರ್ಶನ್ ಅಭಿಮಾನಿಗಳು ಮುಂದಾಗಿದ್ದಾರೆ.ದರ್ಶನ್ ಕೂಡ ಈ ಕಾರ್ಯಕ್ಕೆ ಚಾಲನೆ ನೀಡಿದ್ದು, ಕೇಕ್, ಹಾರಕ್ಕೆ ಖರ್ಚು ಮಾಡುವ ಹಣದಲ್ಲಿ ದವಸ-ಧಾನ್ಯ ತೆಗೆದುಕೊಂಡು ಬರುವಂತೆ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 