ಗವಿಸಿದ್ದೇಶ್ವರ ಶ್ರೀಗಳಿಗೆ ದಸರಾ ಆಹ್ವಾನ: ಚಂದ್ರಶೇಖರ ಶಿವಾಚಾರ್ಯ
Dasara invitation extended to Sri Gavisiddeshwara: Chandrashekhara Shivacharya
ರಾಯಬಾಗ 26: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೈಸೂರು ದಸರಾ ಉತ್ಸವದ ಉದ್ಘಾಟನೆಗೆ ಕೊಪ್ಪಳದ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಶ್ರೀಗಳನ್ನು ಆಹ್ವಾನಿಸಿರುವುದು ಸಂತಸದ ಸಂಗತಿ ಎಂದು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.
ಶುಕ್ರವಾರ ಕೊಪ್ಪಳದ ಗವಿಸಿದ್ದೇಶ್ವರ ಮಠದಲ್ಲಿ ಅಭಿನವ ಗವಿಸಿದ್ದೇಶ್ವರ ಶ್ರೀಗಳನ್ನು ಸತ್ಕರಿಸಿ ಅಭಿನಂದಿಸಿ ಅವರು ಮಾತನಾಡಿದರು. ಚಿಂತಕರು, ಅನ್ನದಾಸೋಹದ ಮೂಲಕ ಸಾವಿರಾರು ಜನರಿಗೆ ನೆರವಾಗುತ್ತಿರುವ ಹಾಗೂ ಬಡ ಮಕ್ಕಳ ಶಿಕ್ಷಣಕ್ಕೆ ಆಶಾಕಿರಣವಾಗಿರುವ ಗವಿಸಿದ್ದೇಶ್ವರ ಮಠದ ಶ್ರೀಗಳಿಗೆ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಸರ್ಕಾರ ಆಹ್ವಾನ ನೀಡಿರುವುದು ಉತ್ತರ ಕರ್ನಾಟಕದ ಮಠಗಳಿಗೆ ಸಂದ ಗೌರವವಾಗಿದೆ ಎಂದರು.
ಈ ಸಂದರ್ಭದಲ್ಲಿ ಹುಕ್ಕೇರಿ ಹಿರೇಮಠ ಸಂಸ್ಥಾನದ ಪರಮಶಿಷ್ಯ ಹಾಗೂ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅರುಣ ಐಹೊಳೆ, ಎಸ್.ಎಸ್. ಕಾಂಬಳೆ, ಬಿ.ಬಿ. ಪೂಜಾರ, ವಿವೇಕಾನಂದ ಯಂಕನಮರಡಿ ಹಾಗೂ ದಯಾನಂದ ಬೆಂಬಲಾಡಿ ಉಪಸ್ಥಿತರಿದ್ದರು.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 