ದಾವೋಸ್: ವರ್ಲ್ಡ್ ಎಕನಾಮಿಕ್ ಫೋರಮ್‌ನಲ್ಲಿ ಭಾಗಿಯಾಗಲಿರುವ ಸಿಎಂ
ದಾವೋಸ್: ಮೇ 23 :ಮುಖ್ಯಮಂತ್ರಿಗಳಾದ ಮೇಲೆ ಮೊದಲ ಬಾರಿಗೆ ವಿದೇಶ ಪ್ರವಾಸ ಕೈಗೊಂಡಿರುವ ಬಸವರಾಜ ಬೊಮ್ಮಾಯಿ ಅವರು ಇಂದು ಈಶಾ ಫೌಂಡೇಷನ್ ನ ಜಗ್ಗಿ ವಾಸುದೇವ ಅವರನ್ನು ಭೇಟಿ ಮಾಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸ್ವಿಟ್ಸರ್ಲೆಂಡಿನ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಹವಾಮಾನ ಬದಲಾವಣೆ ಮತ್ತು ಪರಿಸರ ಮಾಲಿನ್ಯ ಕುರಿತ ಗೋಷ್ಟಿಗೂ ಮುನ್ನ ಈಶಾ ಫೌಂಡೇಶನ್ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ಅವರ ಜೊತೆ ಮಾತುಕತೆ ನಡೆಸಿದರು.
ಈ ವೇಳೆ ರಾಜ್ಯದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಹಾಗೂ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಅವರು ಜೊತೆಗಿದ್ದರು.