ಬಿಳಗಿ

ಗೋ ರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ: ಕ್ರಮಕ್ಕೆ ಆಗ್ರಹ

ಗೋ ರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ: ಕ್ರಮಕ್ಕೆ ಆಗ್ರಹ

ಬೀಳಗಿ 02: ಗೋ ರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಕ್ರಮ ಜರುಗಿಸಬೇಕು ಎಂದು ಶ್ರೀರಾಮ ಸೇನೆ ಜಿಲ್ಲಾ ಘಟಕದಿಂದ ಮಂಗಳವಾರ ಪ್ರತಿಭಟನೆ ನಡೆಸಿ ಗ್ರೇಡ್‌-2 ತಹಶೀಲ್ದಾರ ಆನಂದ ಕೋಲ್ಹಾರ ರವರಿಗೆ ಮನವಿ ಸಲ್ಲಿಸಲಾಯಿತು 

ಗೋ ರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದವರನ್ನು ಬಂಧಿಸಿ ಕ್ರಮ ಜರುಗಿಸಬೇಕು ಎಂದು ಶ್ರೀರಾಮ ಸೇನೆ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಶಾಮ ಶಿಂಧೆ  ಒತ್ತಾಯಿಸಿದರು. 

ಬೆಳಗಾವಿ ಜಿಲ್ಲಾ ಹುಕ್ಕೇರಿ ತಾಲೂಕು ಇಂಗಳಗಿ ಗ್ರಾಮದಲ್ಲಿ ಜೂನ್ 27ರಂದು ಗೋ ರಕ್ಷಣೆಗೆ ಹೋದ 4 ಗೋ ಭಕ್ತರನ್ನು ಗ್ರಾಮದ ಕೆಲ ಗುಂಡಾಗಳು ರಾಕ್ಷಸರಂತೆ ವರ್ತಿಸಿ ತೆಂಗಿನಮರಕ್ಕೆ ಕಟ್ಟಿಹಾಕಿ ಅಮಾನುಷವಾಗಿ ಹೊಡೆದು ಕೊಲೆ ಮಾಡಲು ಪ್ರಯತ್ನಿಸಿದ ಘಟನೆ ಖಂಡಿಸಿ ಗೃಹ ಸಚಿವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಇಂತಹ ಅಮಾನವೀಯ ಘಟನೆ ನಡೆದಿದ್ದು ಅತ್ಯಂತ ನಾಚಿಕೆಗೇಡು. ನಾಗರಿಕ ಸಮಾಜ ತಲೆ ತಗ್ಗಿಸುವಂತ ಹೇಯ ಕೃತ್ಯವಾಗಿದೆ ಎಂದು ದೂರಿದರು. 

ಶ್ರೀರಾಮ ಸೇನೆಯ ಜಿಲ್ಲಾ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಅಜ್ಜನವರು, ತಾಲೂಕು ಅಧ್ಯಕ್ಷ ಶಿವನಗೌಡ ಕಾನಗೌಡರ, ಪ್ರಧಾನ ಕಾರ್ಯದರ್ಶಿ ಬಸವರಾಜ ಚಿಮ್ಮಡ, ಸೋಮಯ್ಯ ಹಿರೇಮಠ, ಸುನಿಲ ಬಾಳಶೆಟ್ಟಿ ಇದ್ದರು. 


ಸುದ್ದಿ ಓದಿ