ಕೊಳ್ಳಾನವರ ನಿಧನ
ಮುಂಡಗೋಡ: ತಾಲೂಕಿನ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಬಿ. ಕೊಳ್ಳಾನವರ(74) ಅನಾರೋಗ್ಯದಿಂದ ಮಂಗಳವಾರ ನಿಧನರಾದರು. ಮೃತರು ರಾಮಕೃಷ್ಣ ಹೆಗಡೆಯವರ ಬೆಂಬಲಿಗರಾಗಿ, ಜನತಾದಳ ಪಕ್ಷದ ಮುಖಂಡರಾಗಿ, ಕಾಂಗ್ರೆಸ್ ಪಕ್ಷದ ತಾಲೂಕು ಅಧ್ಯಕ್ಷರಾಗಿ, ಎಪಿಎಂಸಿ ಅಧ್ಯಕ್ಷರಾಗಿ, ಮಂಡಳ ಪಂಚಾಯಿತಿ ಅಧ್ಯಕ್ಷರಾಗಿ ಹಾಗೂ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಇವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ-ಬಂಧು ಬಳಗ ಅಗಲಿದ್ದಾರೆ