ಸೀತಾರಾಂ ಯೆಚೂರಿಯವರ ನಿಧನ: ಎಸ್‌ಎಫ್‌ಐ ಶ್ರದ್ಧಾಂಜಲಿ
ರಾಣಿಬೆನ್ನೂರ 15: ಇಲ್ಲಿನ ಗೌರಿಶಂಕರ ನಗರದ ನಿವೃತ್ತ ನೌಕರರ ಸಭಾಂಗಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಫೆಡರೇಶನ್ ಮಾಜಿ ಅಧ್ಯಕ್ಷರು ಹಾಗೂ ಮಾಜಿ ಸಂಸದ ಕಾಮ್ರೇಡ್ ಸೀತಾರಾಂ ಯೆಚೂರಿಯವರ ನಿಧನಕ್ಕೆ ಎಸ್‌ಎಫ್‌ಐ ಕಾರ್ಯಕರ್ತರು ಅವರ ಭಾವಚಿತ್ರಕ್ಕೆ ಪುಷ್ಾರೆ್ಪಣಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.
ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಎಸ್, ದೇವರಾಜ ಹುಣಸಿಕಟ್ಟಿ, ಡಾ. ಹೊನ್ನಪ್ಪ ಹೊನ್ನಪ್ಪನವರ ಸೇರಿದಂತೆ ಎಸ್‌ಎಫ್‌ಐ ಕಾರ್ಯಕರ್ತರು ದಿ. ಯೆಚೂರಿಯವರ ಹೋರಾಟದ ನೆನಪುಗಳ ಮೂಲಕ ಗುಣಗಾನ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು.