ವಿಜಯಪುರ

ಪತ್ರಕರ್ತನಿಗೆ ಜೀವಬೆದರಿಕೆ: ದಲಿತ ಸ್ವರಾಜ್ಯ ಸೇನೆ ಖಂಡನೆ

ಪತ್ರಕರ್ತನಿಗೆ ಜೀವಬೆದರಿಕೆ: ದಲಿತ ಸ್ವರಾಜ್ಯ ಸೇನೆ ಖಂಡನೆ


ವಿಜಯಪುರ: ಪತ್ರಕರ್ತ ಪರಶುರಾಮ ಶಿವಶರಣ ಅವರ ಮನೆಗೆ ತೆರಳಿ ಜೀವಬೆದರಿಕೆ ಒಡ್ಡಿದ ಆರೋಪಿಗಳ ವಿರುದ್ಧ ದಲಿತ ಸ್ವರಾಜ್ಯ   ಸಂಘಟನೆ ಅಧ್ಯಕ್ಷ ಗೌಡಪ್ಪ ಬಡಿಗೇರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನ್ನಭಾಗ್ಯ ಯೋಜನೆಯ ಅಕ್ಕಿ ಕಾಳಸಂತೆ ಹಾಗೂ ಅಕ್ರಮ ದಂಧೆ ಕುರಿತು ತನಿಖಾ ವರದಿ ಪ್ರಕಟಿಸಿದ್ದ ಪತ್ರಕರ್ತನ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಕುಟುಂಬಸ್ಥರಲ್ಲಿ ಭೀತಿ ಮೂಡಿಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವ ಕೃತ್ಯ ಎಂದು ಅವರು ಖಂಡಿಸಿದ್ದಾರೆ. ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡುವುದು ಪೊಲೀಸ್ ಇಲಾಖೆಯ ಕರ್ತವ್ಯವಾಗಿದ್ದು, ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ. 


ಸುದ್ದಿ ಓದಿ