ಬೈರುತ್ ಸ್ಫೋಟ: ಮೃತರ ಸಂಖ್ಯೆ 149 ಏರಿಕೆ
ಮಾಸ್ಕೋ, ಆಗಸ್ಟ್ 7 (ಸ್ಪುಟ್ನಿಕ್): ಬೈರುತ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 149 ಕ್ಕೆ ಏರಿದೆ ಎಂದು ಸ್ಥಳೀಯ ಮಾಧ್ಯಮಗಳು ಶುಕ್ರವಾರ ವರದಿ ಮಾಡಿದೆ.
ಇದಕ್ಕೂ ಮುನ್ನ, ಸ್ಫೋಟದಿಂದ ಕೆ 137 ಜನರ ಬಲಿಯಾಗಿದ್ದರು ಎಂದು ಹೇಳಲಾಗಿತ್ತು.ಅನೇಕರು ಗಂಭಿರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ.
ಮಂಗಳವಾರ, ಬೈರುತ್ ಬಂದರಿನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಇದು ನಗರದ ಅರ್ಧದಷ್ಟು ಭಾಗವನ್ನು ಬಾಧಿಸಿತ್ತು.
5,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು ಈ ಸ್ಫೋಟವು ಬಂದರಿನಲ್ಲಿ ಸಂಗ್ರಹ ಮಾಡಲಾಗಿದ್ದ 2,750 ಟನ್ ಅಮೋನಿಯಂ ನೈಟ್ರೇಟ್ ಸೋರಿಕೆಯಿಂದ ದುರಂತ ಸಂಭವಿಸಿದೆ ಎಂದು ಲೆಬನಾನಿನ ಅಧಿಕಾರಿಗಳು ಹೇಳಿದ್ದಾರೆ.